ಕಲ್ಲುಗುಂಡಿ: ಇಲ್ಲಿನ ದಂಡೆಕಜೆ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಲ್ಲುಗುಂಡಿ ದಂಡೆಕಜೆ ಮನೆಯ ದಿನಕರ (40) ಎಂದು ಗುರುತಿಸಲಾಗಿದೆ. ವ್ಯಕ್ತಿಗೆ ಕುಡಿತದ ಚಟವಿತ್ತು ಎನ್ನಲಾಗಿದೆ. ಹೀಗಾಗಿ ಮಾನಸಿಕ ಖಿನ್ನತೆಗೆ ಒಳಗಾಗಿ ಕೃತ್ಯ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ನಿಖರ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

🛒 Recommended for You:




