ಕಂಟೈನರ್ ಹಾಗೂ ಸ್ಕೂಟಿ ಪರಸ್ಪರ ಢಿಕ್ಕಿಯಾಗಿ ಸ್ಕೂಟಿ ಸವಾರರ ಪೈಕಿ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡ ಘಟನೆ ಇಂದು ಕೊಯನಾಡು ಬಳಿಯ ಚೆಡಾವಿನಲ್ಲಿ ಸಂಭವಿಸಿದೆ.



ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಹಾಗೂ ಸುಳ್ಯಕ್ಕೆ ಬರುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಯಿತು. ಪರಿಣಾಮ ಓರ್ವ ಸ್ಕೂಟಿ ಸವಾರ ಮೃತಪಟ್ಟಿದ್ದಾರೆ. ಸಹಸವಾರೆಯಾಗಿದ್ದ ಮಹಿಳೆಗೂ ಗಂಭೀರ ಗಾಯಗಳಾಗಿದ್ದು, ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆತರಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ
🛒 Recommended for You:





