ದ್ವಿಚಕ್ರ ವಾಹನ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ಮಾಡಿದ ಪರಿಣಾಮ, ಯುಕನೋರ್ವ ಗಾಯಗೊಂಡ ಘಟನೆ ಇಂದು ಮುಂಜಾನೆ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಧನುಷ್(30) ಗಾಯಗೊಂಡವರು.ಕುಂಬ್ರ ಪೆಟ್ರೋಲ್ ಬಂಕ್ ನಲ್ಲಿ ಮ್ಯಾನೇಜರ್ ಆಗಿರುವ ಧನುಷ್ ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಪೆಟ್ರೋಲ್ ಬಂಕ್ ಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕುರುಂಜ ಮಣ್ಣಾಪು ತಲುಪಿದಾಗ ಏಕಾಏಕಿ ಕಾಡು ಹಂದಿಯೊಂದು ಧನುಷ್ ಚಲಾಯಿಸುತ್ತಿದ್ದ ಸ್ಕೂಟರ್ ಮೇಲೆ ಎರಗಿದೆ. ಈ ವೇಳೆ ಧನುಷ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾನೆ. ಬಳಿಕ ಕಾಡುಹಂದಿ ಧನುಷ್ ಮೇಲೆ ಎರಗಿದ್ದು, ಅವರ ಬಲ ಕೈಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ಇದರೊಂದಿಗೆ ಆತನ ಇತರ ದೇಹದ ಭಾಗಗಳಿಗೆ ಗಾಯಗೊಳಿಸಿದೆ. ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

  • ಫಿನ್ ಅಲೆನ್ ಸೆಂಚುರಿ ಆರ್ಭಟ: ಆಫ್ರಿಕಾ ವಿರುದ್ಧ ಗೆದ್ದು ಫೈನಲ್‌ಗೆ ಲಗ್ಗೆ ಇಟ್ಟ ಕಿವೀಸ್

    ಫಿನ್ ಅಲೆನ್ ಸೆಂಚುರಿ ಆರ್ಭಟ: ಆಫ್ರಿಕಾ ವಿರುದ್ಧ ಗೆದ್ದು ಫೈನಲ್‌ಗೆ ಲಗ್ಗೆ ಇಟ್ಟ ಕಿವೀಸ್

    ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ 2026 ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ದಕ್ಷಿಣ ಆಫ್ರಿಕಾವನ್ನು 9 ವಿಕೆಟ್‌ಗಳಿಂದ ಮಣಿಸಿ, ಅಧಿಕಾರಯುತವಾಗಿ ಫೈನಲ್ ಪ್ರವೇಶಿಸಿದೆ. ಫಿನ್ ಅಲೆನ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಕಿವೀಸ್ ಪಡೆ ಅತಿ ಸುಲಭವಾಗಿ ಗುರಿ ತಲುಪಿತು. ​ಪಂದ್ಯದ ಮುಖ್ಯಾಂಶಗಳು: ​ಫಿನ್ ಅಲೆನ್ ಐತಿಹಾಸಿಕ ದಾಖಲೆ: ಕಿವೀಸ್ ಆರಂಭಿಕ ಆಟಗಾರ ಫಿನ್ ಅಲೆನ್ ಕೇವಲ 33 ಎಸೆತಗಳಲ್ಲಿ ಶತಕ (100*) ಸಿಡಿಸುವ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ…


  • ಸುಳ್ಯ: ಸಾಲ ಮರುಪಾವತಿ ಚೆಕ್ ಬೌನ್ಸ್ – ಆರೋಪಿಗೆ ದಂಡ ಹಾಗೂ ಜೈಲು ಶಿಕ್ಷೆಯ ಎಚ್ಚರಿಕೆ ನೀಡಿದ ನ್ಯಾಯಾಲಯ

    ಸುಳ್ಯ: ಸಾಲ ಮರುಪಾವತಿ ಚೆಕ್ ಬೌನ್ಸ್ – ಆರೋಪಿಗೆ ದಂಡ ಹಾಗೂ ಜೈಲು ಶಿಕ್ಷೆಯ ಎಚ್ಚರಿಕೆ ನೀಡಿದ ನ್ಯಾಯಾಲಯ

    ಸುಳ್ಯ: ಪಡೆದುಕೊಂಡ ಸಾಲವನ್ನು ಮರುಪಾವತಿಸಲು ನೀಡಿದ್ದ ಚೆಕ್ ಅಮಾನ್ಯಗೊಂಡ (ಬೌನ್ಸ್) ಪ್ರಕರಣದಲ್ಲಿ ಆರೋಪಿಗೆ ಸುಳ್ಯದ ನ್ಯಾಯಾಲಯವು ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ​ಪ್ರಕರಣದ ಹಿನ್ನೆಲೆ: ಸುಳ್ಯ ತಾಲೂಕಿನ ಕಾಂತಮಂಗಲದ ನಿವಾಸಿ ಸಿ.ಎಂ. ಉಸ್ಮಾನ್ ಎಂಬವರು ಗುಂಡಿಯಡ್ಕದ ಇಬ್ರಾಹಿಂ ಅವರಿಂದ ಹಣವನ್ನು ಸಾಲವಾಗಿ ಪಡೆದುಕೊಂಡಿದ್ದರು. ಈ ಸಾಲದ ಬಾಬ್ತು ತೀರಿಸುವ ಸಲುವಾಗಿ ಉಸ್ಮಾನ್ ಅವರು ಇಬ್ರಾಹಿಂ ಅವರಿಗೆ 1 ಲಕ್ಷ ರೂಪಾಯಿ ಮುಖಬೆಲೆಯ ಚೆಕ್ ಅನ್ನು ನೀಡಿದ್ದರು. ಆದರೆ, ಇಬ್ರಾಹಿಂ ಅವರು ಆ ಚೆಕ್ ಅನ್ನು ಬ್ಯಾಂಕಿಗೆ…


  • ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ನಿರಾಸೆ: ಜೂನ್‌ಗೆ ಮುಂದೂಡಲ್ಪಟ್ಟ ‘ಟಾಕ್ಸಿಕ್’ ರಿಲೀಸ್!

    ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ನಿರಾಸೆ: ಜೂನ್‌ಗೆ ಮುಂದೂಡಲ್ಪಟ್ಟ ‘ಟಾಕ್ಸಿಕ್’ ರಿಲೀಸ್!

    ಬಹುನಿರೀಕ್ಷಿತ ‘ಟಾಕ್ಸಿಕ್’ (Toxic: A Fairy Tale for Grown-ups) ಸಿನಿಮಾದ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದ ರಾಕಿಭಾಯ್ ಅಭಿಮಾನಿಗಳಿಗೆ ಬೇಸರದ ಸುದ್ದಿಯೊಂದು ಹೊರಬಿದ್ದಿದೆ. ಇದೇ ಮಾರ್ಚ್ ೧೯ ರಂದು ವಿಶ್ವದಾದ್ಯಂತ ಅದ್ದೂರಿಯಾಗಿ ತೆರೆಕಾಣಬೇಕಿದ್ದ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಬಿಡುಗಡೆಯನ್ನು ಇದೀಗ ಅಧಿಕೃತವಾಗಿ ಜೂನ್ ೪, ೨೦೨೬ ಕ್ಕೆ ಮುಂದೂಡಲಾಗಿದೆ. ​ಕಾರಣವೇನು? ಮಧ್ಯಪ್ರಾಚ್ಯ (Middle East) ದೇಶಗಳಲ್ಲಿ ಪ್ರಸ್ತುತ ಉದ್ಭವಿಸಿರುವ ಯುದ್ಧದ ಕಾರ್ಮೋಡ ಹಾಗೂ ಉದ್ವಿಗ್ನ ಪರಿಸ್ಥಿತಿಯೇ ಚಿತ್ರತಂಡದ ಈ ದಿಢೀರ್ ನಿರ್ಧಾರಕ್ಕೆ ಪ್ರಮುಖ ಕಾರಣ. ಗಲ್ಫ್…


Leave a Reply

Your email address will not be published. Required fields are marked *