ಬೆಳ್ಳಾರೆ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿಯನ್ನು ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ದಿಲ್ಲಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬಂಧಿಸಿದ್ದಾರೆ.

ಬಂಧಿತನನ್ನು ಬಂಟ್ವಾಳದ ಕೊಡಾಜೆಯ ನಿವಾಸಿ ಮಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಈತ ಪ್ರಕರಣದ 6ನೇ ಆರೋಪಿಯಾಗಿದ್ದಾನೆ. ಈತ ವಿದೇಶದಿಂದ ಭಾರತಕ್ಕೆ ಆಗಮಿಸಿದ್ದಾಗ ಎನ್ ಐಎ ಬಲೆಗೆ ಬಿದ್ದಿದ್ದಾನೆಂದು ತಿಳಿದು ಬಂದಿದೆ.
🛒 Recommended for You:




