Category: ಹವಾಮಾನ

‘ವಾಯುಭಾರ ಕುಸಿತ’ : ರಾಜ್ಯದಲ್ಲಿ ಇನ್ನೂ 1 ವಾರ ಭಾರೀ ಮಳೆ ಮುನ್ಸೂಚನೆ.!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರಾಂತ್ಯದವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಇಂದು, ನಾಳೆ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ…

ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2-3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಎರಡು ದಿನ ಮತ್ತು ಹಾಸನ, ಕೊಡಗು, ಮೈಸೂರಿನಲ್ಲಿ ಅ.15ರಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇರುವುದರಿಂದ…

ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಆ. 18ರಂದು ರೆಡ್ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ವ್ಯಾಪಕ ಮಳೆಯಾಗಿದೆ. ಸುಳ್ಯ, ಸುಬ್ರಹ್ಮಣ್ಯ, ಕಡಬ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ ಮತ್ತು ಮಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಕೆಲವೆಡೆ ಬಿಟ್ಟು ಬಿಟ್ಟು ಮಳೆಯಾದರೆ, ಬಹುತೇಕ ಕಡೆಗಳಲ್ಲಿ ದಿನವಿಡೀ ಮಳೆ ಸುರಿದಿದೆ.ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗ ಮಧ್ಯದ ಶಿರಿಬಾಗಿಲು…

ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ; ಬೆಂಗಳೂರು – ಮುರುಡೇಶ್ವರ ರೈಲು ಸ್ಥಗಿತ

ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ.ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತವಾಗಿದೆ. ಭಾರೀ ಗಾತ್ರದ ಬಂಡೆ…

ಕರಾವಳಿಯಲ್ಲಿ ಜೂನ್ 14 ರವರೆಗೆ ಬಿರುಗಾಳಿ ಸಹಿತ ಬಾರೀ ಮಳೆ ಎಚ್ಚರಿಕೆ

ನೀರಿಕ್ಷೆಗಿಂತ ಮುಂಚೆ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಕಳೆದ ಕೆಲವು ದಿನಗಳಿಂದ ಸ್ವಲ್ಪ ಬಿಡುವು ಪಡೆದಿತ್ತು, ಇದೀಗ ಜೂನ್ 12 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 12 ರಿಂದ ಬಹುತೇಕ ಕರ್ನಾಟಕದಲ್ಲಿ…

ನೈಜೀರಿಯಾದಲ್ಲಿ ಭೀಕರ ಪ್ರವಾಹ : 115 ಮಂದಿ ಸಾವು, ಹಲವರು ನಾಪತ್ತೆ

ನೈಜೀರಿಯಾದ ನೈಜರ್ ರಾಜ್ಯದಲ್ಲಿ ಧಾರಾಕಾರ ಮಳೆಯಿಂದಾಗಿ 115 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬುಧವಾರ ರಾತ್ರಿ ಮಳೆ ಪ್ರಾರಂಭವಾಗಿ ಗುರುವಾರ ಬೆಳಿಗ್ಗೆಯವರೆಗೂ ಮುಂದುವರಿದ ನಂತರ ಮೋಕ್ವಾ ಪಟ್ಟಣವು ಪ್ರವಾಹದಲ್ಲಿ…

ಪೆರಾಜೆ ಸಮೀಪ ಹೆದ್ದಾರಿಗೆ ಬಿದ್ದ ಮರ; ಸಂಚಾರ ಅಸ್ತವ್ಯಸ್ತ

ಮೆ.31:ಸುಳ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಬರೆ ಕುಸಿತ ಸಂಭವಿಸಿದ್ದು, ವಿದ್ಯುತ್ ಕಂಬಗಳು ಧರಾಶಾಹಿಯಾದ ಕಾರಣ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಇದೀಗ ಪೆರಾಜೆ ಸಮೀಪ ಬೃಹತ್ ಮರವೊಂದು ರಾಷ್ಟ್ರೀಯ ಹೆದ್ದಾರಿಗೆ ಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ವಿದ್ಯುತ್ ಕಂಬದ ಮೇಲೆ ಈ…

ಸುಳ್ಯ: ಜೂನಿಯರ್ ಕಾಲೇಜು ಬಳಿ ಬೃಹತ್ ಕಾಂಪೌಂಡ್ ಕುಸಿತ

ಮೆ.31 ಸುಳ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಬರೆ ಕುಸಿತ ಸಂಭವಿಸಿದ್ದು, ವಿದ್ಯುತ್ ಕಂಬಗಳು ಧರಾಶಾಹಿಯಾದ ಕಾರಣ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಸುಳ್ಯದ ಜೂನಿಯರ್ ಕಾಲೇಜ್ ಬಳಿಯ ನಿವಾಸಿ ಮುಹಮ್ಮದ್ ಮಲ್ನಾಡ್ ಎಂಬವರ ಮನೆಯ ಹಿಂದಿನ ಬೃಹತ್ ಗಾತ್ರದ ಕಾಂಪೌಂಡ್…

ಮೈ ತುಂಬಿ ಹರಿದ ಕುಮಾರಧಾರ ನದಿ; ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ

ಮೇ 26: ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಈ ಬಾರಿ ಮೇ ತಿಂಗಳಲ್ಲೇ ದಕ್ಷಿಣಕನ್ನಡ ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮಘಟ್ಟದಲ್ಲಿ ಮಳೆ ಅಬ್ಬರಕ್ಕೆ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ. ಈ ಬಾರಿ ಮೇ…

ಕಡಬ: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ; ಕಾರಿನಲ್ಲಿ ಸಿಲುಕಿಕೊಂಡ ಪ್ರಯಾಣಿಕರು- ನಾಲ್ವರಿಗೆ ಗಾಯ

ಕಡಬ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ರವಿವಾರ ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ನೂಜಿಬಾಳ್ತಿಲ ಎಂಬಲ್ಲಿ ಸಂಭವಿಸಿದೆ. ಕುಕ್ಕೆ ಸುಬ್ರಹ್ಮಣ್ಯ ಭಾಗದಿಂದ ಇಚ್ಚಂಪಾಡಿ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರಿನ…