ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮೇ 11 ರಂದು ತನ್ನ ಸ್ವಂತ ಮನೆಗೆ ಬೆಂಕಿ ಹಚ್ಚಿದ್ದಾನೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಗಲಾಟೆ ಮಾಡಿ ಉಗ್ರ ವರ್ತನೆ ತೋರಿದ್ದರಿಂದ ಆತನ ಕುಟುಂಬ ಸದಸ್ಯರು ಭಯಭೀತರಾಗಿದ್ದರು ಎನ್ನಲಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಭಾರೀ ಅಗ್ನಿ ದುರಂತವೊಂದು ತಪ್ಪಿದಂತಾಗಿದೆ. ಘಟನೆಯ ನಂತರ, ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಕುಡಿದಿದ್ದ ವ್ಯಕ್ತಿಯನ್ನು ಸಮಾಧಾನಪಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ವ್ಯಸನ ಮುಕ್ತಿ ಕೇಂದ್ರಕ್ಕೆ ದಾಖಲಿಸಿದ್ದಾರೆ.