ಕಾಸರಗೋಡು: ಕೆಎಸ್ಆರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಖಾಸಗಿ ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸದುರ್ಗ ಠಾಣಾ ವ್ಯಾಪ್ತಿಯ ಪಡನ್ನಕ್ಕಾಡ್ ನಲ್ಲಿ ನಡೆದಿದೆ.

ಮೃತಪಟ್ಟ ಬೈಕ್ ಸವಾರ ಸಾಫ್ಟ್ ವೇರ್ ಇಂಜಿನಿಯರ್ ಬೇಡಡ್ಕ ತೆಕ್ಕೆಕರೆ ನಿವಾಸಿ ಪಿ. ಶ್ರೀನೇಶ್ (39) ಎಂದು ಗುರುತಿಸಲಾಗಿದೆ.
🛒 Recommended for You:
ಪಡನ್ನಕ್ಕಾಡ್ ಮೇಲ್ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದೆ. ಕಾಞಂಗಾಡ್ನ ಖಾಸಗಿ ಸಂಸ್ಥೆಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಶ್ರೀನೇಶ್ ಕಣ್ಣೂರಿನಿಂದ ಬೇಡಡ್ಕಕ್ಕೆ ಬೈಕ್ನಲ್ಲಿ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




