virat kohli 8 1virat kohli 8 1

ಟೀಂ ಇಂಡಿಯಾದ ಮಾಜಿ ನಾಯಕ, ರನ್ ಮಷಿನ್ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಕೊಹ್ಲಿ, ತಮ್ಮ ನಿವೃತ್ತಿಯ ಬಗ್ಗೆ ಅಧಿಕೃತ ಘೋಷಣೆ ಮಾಡಿದರು. ಭಾರತ ಎರಡನೇ ಬಾರಿಗೆ ಟಿ20 ವಿಶ್ವಕಪ್‌ ಪ್ರಶಸ್ತಿ ಗೆದ್ದಿದೆ. ಬಾರ್ಬಡೋಸ್‌ನಲ್ಲಿ ನಡೆದ ಫೈನಲ್‌ನಲ್ಲಿ ಟೀಂ ಇಂಡಿಯಾ ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಭಾರತ ತನ್ನ 11 ವರ್ಷಗಳ ಐಸಿಸಿ ಟ್ರೋಫಿಯ ಬರವನ್ನು ಕೊನೆಗೊಳಿಸಿತು. ಭಾರತ ಈ ಹಿಂದೆ 2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಅದೇ ಸಮಯದಲ್ಲಿ ಭಾರತ 17 ವರ್ಷಗಳ ನಂತರ ಟಿ20 ವಿಶ್ವಕಪ್ ಗೆದ್ದ ಸಾಧನೆ ಮಾಡಿದೆ. ಆದರೆ ಗೆಲುವಿನ ಖುಷಿಯಲ್ಲಿ ಟೀಂ ಇಂಡಿಯಾಕ್ಕೆ ಆಘಾತ ಎದುರಾಗಿದೆ. ತಂಡದ ಮಾಜಿ ನಾಯಕ, ರನ್ ಮಷಿನ್ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಕೊಹ್ಲಿ, ತಮ್ಮ ನಿವೃತ್ತಿಯ ಬಗ್ಗೆ ಅಧಿಕೃತ ಘೋಷಣೆ ಮಾಡಿದರು.

Leave a Reply

Your email address will not be published. Required fields are marked *