ಕಾರ್ಯಪ್ರವೃತ್ತರಾದ ರಾಧಾಕೃಷ್ಣ ಬೊಳ್ಳೂರು – ತಹಶೀಲ್ದಾರ್ ಭೇಟಿ
ಸುಳ್ಯ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ನಾಗಪಟ್ಟಣದ ವೆಂಟೆಡ್ ಡ್ಯಾಂ ನಲ್ಲಿ ತೀವ್ರ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಳವಾಗಿದ್ದು, ವೆಂಟೆಡ್ ಡ್ಯಾಂ ನ ಗೇಟ್ ಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯದೇ ಇದ್ದು, ನೀರಿನ ಮಟ್ಟ ಹೆಚ್ಚಳವಾಗಿ ಪರಿಸರದ ನಿವಾಸಿಗಳಿಗೆ ಆತಂಕದ ಪರಿಸ್ಥಿತಿ ನಿರ್ಮಾಣವಾಗಿರುವುದನ್ನು ಗಮನಿಸಿದ ಆಲೆಟ್ಟಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀ ರಾಧಾಕೃಷ್ಣ ಪರಿವಾರಕಾನ ರವರು ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅವರ ಗಮನಕ್ಕೆ ತಂದಿದ್ದರು.
ತಕ್ಷಣ ಕಾರ್ಯಪ್ರವೃತ್ತರಾದ ರಾಧಾಕೃಷ್ಣ ಬೊಳ್ಳೂರು ಸುಳ್ಯ ತಾಲೂಕು ತಹಶೀಲ್ದಾರ್ ರವರನ್ನು ಭೇಟಿ ಮಾಡಿ ಶೀಘ್ರ ವೆಂಟೆಡ್ ಡ್ಯಾಂ ನ ಎಲ್ಲಾ ಗೇಟ್ ಗಳನ್ನು ತೆರೆಸುವಂತೆ ಆಗ್ರಹಿಸಿದರು.
ತಕ್ಷಣವೇ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದ ತಹಶೀಲ್ದಾರ್ ಸಂಜೆಯೊಳಗಾಗಿ ವೆಂಟೆಡ್ ಡ್ಯಾಂ ನ ಗೇಟ್ ತೆರವುಗೊಳಿಸಿ ವರದಿ ನೀಡುವಂತೆ ಸೂಚಿಸಿದರು.
ಸಣ್ಣ ನೀರಾವರಿ ಇಲಾಖೆಯ ತಾಂತ್ರಿಕ ತಂಡವನ್ನು ಇಂದು ಸಂಜೆ ಕಳುಹಿಸಿ ವೆಂಟೆಡ್ ಡ್ಯಾಮ್ ನ ಎಲ್ಲಾ ಬಾಗಿಲುಗಳನ್ನು ತೆರೆದು ನದಿ ತೀರದ ನಿವಾಸಿಗಳಿಗೆ ಯಾವುದೇ ತೊಂದರೆ ಯಾಗದಂತೆ ನೋಡಿಕೊಳ್ಳುವುದಾಗಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ತಹಶೀಲ್ದಾರ್ ರವರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಭವಾನಿಶಂಕರ್ ಕಲ್ಮಡ್ಕ, ಆಲೆಟ್ಟಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಅರೋಗ್ಯ ರಕ್ಷಾ ಸಮಿತಿ ಸದಸ್ಯ ರಾಧಾಕೃಷ್ಣ ಪರಿವಾರಕಾನ, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಉಪಸ್ಥಿತರಿದ್ದರು.