Nammasullia: ಮಡಿಕೇರಿ ತಾಲೂಕಿನ ದೇವರಕೊಲ್ಲಿ ಬಳಿ ಶುಕ್ರವಾರ ಮಧ್ಯಾಹ್ನ ಲಾರಿ ಹಾಗೂ ಕಾರು ಮಧ್ಯೆ ನಡೆದ ಭೀಕರ ಮುಖಾಮುಖಿ ಡಿಕ್ಕಿಯಾದ ಘಟನೆ ವರದಿಯಾಗಿದೆ.
ಅಪಘಾತದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ಕು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ. ಮೃತರನ್ನು ನಿಹಾದ್, ರಿಶಾನ್, ರಾಶಿಬ್ ಎಂದು ಗುರುತಿಸಲಾಗಿದೆ. ಇನ್ನೋರ್ವನ ಹೆಸರು ತಿಳಿದುಬಂದಿಲ್ಲ. ಮೃತಪಟ್ಟರನ್ನು ಕೊಡಗು ಜಿಲ್ಲೆಯ ಗೋಣಿಕೊಪ್ಪ ಮೂಲದವರೆಂದು ತಿಳಿದುಬಂದಿದೆ


