Nammasullia: ಮಡಿಕೇರಿ ತಾಲೂಕಿನ ದೇವರಕೊಲ್ಲಿ ಬಳಿ ಶುಕ್ರವಾರ ಮಧ್ಯಾಹ್ನ ಲಾರಿ ಹಾಗೂ ಕಾರು ಮಧ್ಯೆ ನಡೆದ ಭೀಕರ ಮುಖಾಮುಖಿ ಡಿಕ್ಕಿಯಾದ ಘಟನೆ ವರದಿಯಾಗಿದೆ.

ಅಪಘಾತದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ಕು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ. ಮೃತರನ್ನು ನಿಹಾದ್, ರಿಶಾನ್, ರಾಶಿಬ್, ಅನೀಶ್ ಎಂದು ಗುರುತಿಸಲಾಗಿದೆ. ಮೃತಪಟ್ಟರನ್ನು ಕೊಡಗು ಜಿಲ್ಲೆಯ ಗೋಣಿಕೊಪ್ಪ ಮೂಲದವರೆಂದು ತಿಳಿದುಬಂದಿದೆ. ನಾಲ್ಕು ಮೃತ ಶರೀರವನ್ನು ಸುಳ್ಯ ಕೆವಿಜಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈಗಾಗಲೇ ಮಡಿಕೇರಿ ಅಡಿಷನಲ್ ಎಸ್.ಪಿ ದಿನೇಶ್ ಕುಮಾರ್ ಆಗಮಿಸಿದ್ದು ಇನ್ನೇನು ಕೆಲ ನಿಮಿಷಗಳಲ್ಲಿ ಎಲ್ಲ ಮೃತ ಶರೀರವನ್ನು ಆ್ಯಂಬ್ಯುಲೆನ್ಸ್ ಮೂಲಕ ಮಡಿಕೇರಿ ಆಸ್ಪತ್ರೆಗೆ ರವಾನಿಸಲಾಗುವುದು ಎಂದು ತಿಳಿದುಬಂದಿದೆ.


