Nammasullia: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಮಾತೃ ಸಂಸ್ಥೆ, ಸಾವಿರಾರು ವಿದ್ಯಾರ್ಥಿಗಳನ್ನು ಸಮಾಜಕ್ಕೆ ಕೊಡುಗೆ ನೀಡಿದ ಸುಳ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ನೆಹರು ಮೆಮೋರಿಯಲ್ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯದ ೨೦೨೪-೨೫ನೇ ಸಾಲಿನ ಅಂತಿಮ ಪದವಿ ಪರೀಕ್ಷೆಗಳಲ್ಲಿ ದಾಖಲೆಯ ಫಲಿತಾಂಶ ಪಡೆದು ವಿದ್ಯಾರ್ಥಿಗಳು ಅದ್ವಿತೀಯ ಸಾಧನೆಗೈದಿದ್ದಾರೆ.

ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಯಲ್ಲಿ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ ಹೊಂದಿದ್ದು ಶೇ. ೧೦೦ ಫಲಿತಾಂಶದೊಂದಿಗೆ ವಿದ್ಯಾರ್ಥಿನಿ ಸೌಮ್ಯ ಎಸ್ ಎಲ್ಲಾ ವಿಷಯಗಳಲ್ಲಿ ಸಂಪೂರ್ಣ ಅಂಕ ಪಡೆದು ೬೫೦ ರಲ್ಲಿ ೬೫೦ ಅಂಕಗಳೊಂದಿಗೆ ಅನುಪಮ ಸಾಧನೆ ಮಾಡಿದ್ದಾಳೆ. ಬಿ.ಬಿ.ಎ ವಿಭಾಗದಲ್ಲಿ ೧೬ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನೊಂದಿಗೆ ತೇರ್ಗಡೆ ಹೊಂದಿದ್ದು, ಬಿ.ಎಸ್.ಡಬ್ಲ್ಯೂ ವಿಭಾಗದ ೯ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡು ಈ ಎರಡೂ ವಿಭಾಗವು ಶೇ. ೧೦೦ ಫಲಿತಾಂಶ ದಾಖಲಿಸಿದೆ.
ವಾಣಿಜ್ಯ ವಿಭಾಗದಲ್ಲಿ ೫೮ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ ಹೊಂದಿದ್ದು ಶೇ.೯೪% ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದೆ.





