ಸುಳ್ಯ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಕುಶಾಲನಗರ ದಿಂದ ಮಂಗಳೂರು ಕಡೆ ಹೊರಟಿದ್ದ ಸ್ವಿಫ್ಟ್ ಡಿಸೈರ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಇನ್ನೋವಾ ಕಾರು ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಡಿಸೈರ್ ಕಾರಿನಲ್ಲಿದ್ದ ಮಹಿಳೆಯ ಕಾಲಿಗೆ ಸಣ್ಣ ಪ್ರಮಾಣದ ಏಟಾಗಿದೆ. ಹಾಗೂ ಎರಡು ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ ಎಂದು ತಿಳಿದ ಬಂದಿದೆ.