ದ್ವಿಚಕ್ರ ವಾಹನ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ಮಾಡಿದ ಪರಿಣಾಮ, ಯುಕನೋರ್ವ ಗಾಯಗೊಂಡ ಘಟನೆ ಇಂದು ಮುಂಜಾನೆ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಧನುಷ್(30) ಗಾಯಗೊಂಡವರು.ಕುಂಬ್ರ ಪೆಟ್ರೋಲ್ ಬಂಕ್ ನಲ್ಲಿ ಮ್ಯಾನೇಜರ್ ಆಗಿರುವ ಧನುಷ್ ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಪೆಟ್ರೋಲ್ ಬಂಕ್ ಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕುರುಂಜ ಮಣ್ಣಾಪು ತಲುಪಿದಾಗ ಏಕಾಏಕಿ ಕಾಡು ಹಂದಿಯೊಂದು ಧನುಷ್ ಚಲಾಯಿಸುತ್ತಿದ್ದ ಸ್ಕೂಟರ್ ಮೇಲೆ ಎರಗಿದೆ. ಈ ವೇಳೆ ಧನುಷ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾನೆ. ಬಳಿಕ ಕಾಡುಹಂದಿ ಧನುಷ್ ಮೇಲೆ ಎರಗಿದ್ದು, ಅವರ ಬಲ ಕೈಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ಇದರೊಂದಿಗೆ ಆತನ ಇತರ ದೇಹದ ಭಾಗಗಳಿಗೆ ಗಾಯಗೊಳಿಸಿದೆ. ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
-
ಗಾಂಧಿನಗರ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಶೋಭಾರವರಿಗೆ ಗೌರವ ಸಮರ್ಪಣೆ ಮತ್ತು ಬೀಳ್ಕೊಡುಗೆ ಸಮಾರಂಭ

ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಕಳೆದ 31 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಇಂದು ಅಕ್ಟೋಬರ್ 31.2025ನೇ ಶುಕ್ರವಾರದಂದು ಸೇವಾ ನಿವೃತ್ತಿ ಹೊಂದುತ್ತಿರುವ ಶ್ರೀಮತಿ ಶೋಭಾ ಇವರನ್ನು ಅಂಗನವಾಡಿ ಮಕ್ಕಳ ಪೋಷಕರು ಮತ್ತು ಗಾಂಧಿನಗರ ನಾಗರೀಕರ ಪರವಾಗಿ ಗೌರವ ಸಮರ್ಪಣೆ ಮಾಡಿ ಅದ್ದೂರಿಯಾಗಿ ಬಿಳ್ಕೊಡಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎಮ್ ಮುಸ್ತಫ ರವರು ವಹಿಸಿದ್ದರು. ಸುಳ್ಯ ತಹಶೀಲ್ದಾರರಾದ ಮಂಜುಳಾ ಮೇಡಂಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶೈಲಜಾ ಮೇಡಂ (ಸಿಡಿಪಿಒ)ಸುಳ್ಯ, ಸುಳ್ಯ ನಗರ ಪಂಚಾಯತ್ ಸದಸ್ಯರಾದ ಕೆ.ಎಸ್…
-
ಕೆವಿಜಿ ಪಾಲಿಟೆಕ್ನಿಕ್: ವಾರ್ಷಿಕ ಕ್ರೀಡಾಕೂಟ

ಕ್ರೀಡೆಗೂ ಜೀವನಕ್ಕೂ ಸಾಮ್ಯತೆ ಇದೆ – ಮೌರ್ಯ ಆರ್. ಕುರುಂಜಿ ಸುಳ್ಯ : ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ 40ನೇ ವರ್ಷದ ವಾರ್ಷಿಕ ಕ್ರೀಡಾಕೂಟವು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ,ಕಮಿಟಿ “ಬಿ” ಯ ನಿರ್ದೇಶಕ ಮೌರ್ಯ ಆರ್. ಕುರುಂಜಿ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಾ ಕ್ರೀಡೆಗೂ ಜೀವನಕ್ಕೂ ಸಾಮ್ಯತೆ ಇದೆ. ಕ್ರೀಡೆಯಲ್ಲಿ ಹೇಗೆ ಸೋಲು ಗೆಲುವುಗಳಿರುತ್ತವೋ ಹಾಗೆಯೇ ಜೀವನದಲ್ಲಿಯೂ ಕೂಡ ಸೋಲು ಗೆಲುವುಗಳು ಬರುತ್ತವೆ. ಅವುಗಳನ್ನೆಲ್ಲ ಮೆಟ್ಟಿ ನಿಲ್ಲಬೇಕಾದರೆ ನಾವು ಮಾನಸಿಕವಾಗಿ ಮತ್ತು…

