ದ್ವಿಚಕ್ರ ವಾಹನ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ಮಾಡಿದ ಪರಿಣಾಮ, ಯುಕನೋರ್ವ ಗಾಯಗೊಂಡ ಘಟನೆ ಇಂದು ಮುಂಜಾನೆ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಧನುಷ್(30) ಗಾಯಗೊಂಡವರು.ಕುಂಬ್ರ ಪೆಟ್ರೋಲ್ ಬಂಕ್ ನಲ್ಲಿ ಮ್ಯಾನೇಜರ್ ಆಗಿರುವ ಧನುಷ್ ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಪೆಟ್ರೋಲ್ ಬಂಕ್ ಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕುರುಂಜ ಮಣ್ಣಾಪು ತಲುಪಿದಾಗ ಏಕಾಏಕಿ ಕಾಡು ಹಂದಿಯೊಂದು ಧನುಷ್ ಚಲಾಯಿಸುತ್ತಿದ್ದ ಸ್ಕೂಟರ್ ಮೇಲೆ ಎರಗಿದೆ. ಈ ವೇಳೆ ಧನುಷ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾನೆ. ಬಳಿಕ ಕಾಡುಹಂದಿ ಧನುಷ್ ಮೇಲೆ ಎರಗಿದ್ದು, ಅವರ ಬಲ ಕೈಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ಇದರೊಂದಿಗೆ ಆತನ ಇತರ ದೇಹದ ಭಾಗಗಳಿಗೆ ಗಾಯಗೊಳಿಸಿದೆ. ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
-
ಕೆ.ಸಿ.ಎಫ್ ಒಮಾನ್: ರಬೀಅ್ 26 ಬೃಹತ್ ಮೀಲಾದ್ ಸಮಾವೇಶದ ಸ್ವಾಗತ ಸಮಿತಿ ರಚನೆ ಹಾಗೂ ಮಾಝಿನ್ ತಂಙಳ್ ಸನ್ನಿಧಿಯಲ್ಲಿ ಪೋಸ್ಟರ್ ಅನಾವರಣೆ

ಕರ್ನಾಟಕ ಕಲ್ಚರಲ್ ಫೌಂಡೇಷನ್ ಕೆ.ಸಿ.ಎಫ್ ಒಮಾನ್ ವತಿಯಿಂದ ವರ್ಷಂಪ್ರತಿ ಆಚರಿಸುವ ಬೃಹತ್ ಮೀಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿ ಜೂನ್ 12 ಶುಕ್ರವಾರ ಸೀಬ್ ಮದರಸದಲ್ಲಿ ಸಯ್ಯಿದ್ ಆಬಿದ್ ಅಲ್ ಐದರೂಸಿರವರ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಕೆ.ಸಿ.ಎಫ್ ಐ.ಸಿ ನಾಯಕರು, ರಾಷ್ಟ್ರೀಯ ಸಮಿತಿಯ ಅಧ್ಯಕ್ಷರು, ಪ್ರ.ಕಾರ್ಯದರ್ಶಿ, ಕೋಶಾಧಿಕಾರಿ ಸಹಿತ ವಿವಿಧ ಝೋನ್ ಗಳಿಂದ ಆಗಮಿಸಿದ ನಾಯಕರ ಉಪಸ್ಥಿತಿಯಲ್ಲಿ ಸ್ವಾಗತ ಸಮಿತಿ ರಚಿಸಲಾಯಿತು. ಚಯಾರ್ಮ್ಯಾನ್ ಉಮ್ಮರ್ ಸಖಾಫಿ ಎಡಪಾಲ,ಕನ್ವೀನರ್ ಸ್ವಾದಿಖ್ ಹಾಜಿ ಸುಳ್ಯ ಹಾಗೂಕೋಶಾಧಿಕಾರಿ ರಿಯಾಝ್ ಮಂಜನಾಡಿ ವೈಸ್ ಚಯರ್ಮ್ಯಾನ್…
-
ಎನ್.ಎಂ.ಸಿ: ಅಂತರಾಷ್ಟ್ರೀಯ ಯೋಗ ದಿನಾಚರಣೆ

ಸುಳ್ಯದ ನೆಹರೂ ಸ್ಮಾರಕ ಮಹಾವಿದ್ಯಾಲಯದ ಎನ್‌ಸಿಸಿ ಘಟಕದ ವತಿಯಿಂದ 19 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ, ಮಡಿಕೇರಿ ಇದರ ಮಾರ್ಗದರ್ಶನದಲ್ಲಿ ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನವನ್ನು ಕಾಲೇಜಿನ ಆವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಸುಳ್ಯದ ಯೋಗ ತರಬೇತುದಾರರಾದ ಶ್ರೀಮತಿ ಉಷಾ ಕೆ. ಅವರು ಉದ್ಘಾಟಿಸಿ ಮಾತನಾಡಿ, ಯೋಗವು ದೈಹಿಕ ಆರೋಗ್ಯ, ಮಾನಸಿಕ ನೆಮ್ಮದಿ ಹಾಗೂ ಸಮತೋಲನಯುತ ಜೀವನಶೈಲಿಗೆ ಅತ್ಯಂತ ಅಗತ್ಯವಾದ ಸಾಧನವಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಬದುಕಿನಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಎನ್‌ಸಿಸಿ ಅಸೋಸಿಯೇಟ್ ಅಧಿಕಾರಿ…
-
ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ

ಸಮುದಾಯಕ್ಕೆ ಹಾಗೂ ದೇಶಕ್ಕೆ ತುಂಬಲಾರದ ನಷ್ಟ: ಟಿ.ಎಂ ಶಾಹಿದ್ ತೆಕ್ಕಿಲ್ ಮಂಗಳೂರು: ಕೇಂದ್ರ ಮುಶಾವರ ಸದಸ್ಯರೂ, ದಕ್ಷಿಣ ಕನ್ನಡ ಜಿಲ್ಲಾ ಖಾಝಿಯವರಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರು ನಿಧನರಾಗಿದ್ದಾರೆ. ಕರ್ನಾಟಕ ಹಾಗೂ ಕೇರಳ ರಾಜ್ಯದ ಅನೇಕ ಜಮಾತ್‌ಗಳಿಗೆ ಖಾಝಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ್ದ ಅವರು, ಧಾರ್ಮಿಕ ಮತ್ತು ಸಾಮಾಜಿಕ ಶಿಕ್ಷಣ ರಂಗದಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ಖಾಝಿಯವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ…










