
ಬೆಳ್ತಂಗಡಿ: ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಶಾಫಿ ಬೆಳ್ಳಾರೆ ಎ. 7ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿ ಶಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್ ಮೂಲಕ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ. 2017 ರಲ್ಲಿ ಕಲ್ಲಡ್ಕ ಭಟ್ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ. ಆರೋಪಿ ಶಾಫಿ ಬೆಳ್ಳಾರೆ ಅವರನ್ನು ಪ್ರವೀಣ್ ನೆಟ್ವಾರ್ ಹತ್ಯೆ ಪ್ರಕರಣದಲ್ಲಿ ಎರಡು ವರ್ಷದ ಹಿಂದೆ ಎನ್.ಐ.ಎ ಬಂಧಿಸಿ ನ್ಯಾಯಾಂಗ ಬಂಧನಲ್ಲಿರಿಸಿದೆ. ಈ ವರೆಗೂ ಜಾಮೀನು ಮಂಜೂರಾಗಿಲ್ಲ. ಕೋರ್ಟ್ ಗೆ ಹಾಜರು ಪಡಿಸಿದ ಅವರನ್ನು ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ
🛒 Recommended for You:




