ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ದಾಳಿಯಲ್ಲಿ 100 ಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ರಫೇಲ್ ಜೆಟ್ಗಳು ಪಾಕಿಸ್ತಾನದ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ‘ಸ್ಕ್ಯಾಲ್ಪ್ ಕ್ಷಿಪಣಿಗಳು’ ಬಳಸಿ ಹೊಡೆದು ಹಾಕಿವೆ.ಭಯೋತ್ಪಾದಕರ ಒಂಬತ್ತು ಗುರಿಗಳ ಮೇಲೆ ಭಾರತೀಯ ಸೇನಾ ಪಡೆಗಳು ನಡೆಸಿದ ದಾಳಿಯಲ್ಲಿ ಹ್ಯಾಮರ್ ಬಾಂಬ್ಗಳನ್ನು ಸಹ ಬಳಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಿದ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್ ನಾಯಕತ್ವದ ಉನ್ನತ ನಾಯಕರನ್ನು ಗುರಿಯಾಗಿಸುವ ಉದ್ದೇಶದಿಂದ ಪಡೆಗಳು ದಾಳಿಗೆ ಸ್ಥಳವನ್ನು ಆಯ್ಕೆ ಮಾಡಿದ್ದವು.

ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ಬಗ್ಗೆ ಬೆಳಿಗ್ಗೆ 10 ಗಂಟೆಗೆ ರಕ್ಷಣಾ ಸಚಿವಾಲಯ ಮಾಧ್ಯಮಗಳಿಗೆ ಮಾಹಿತಿ ನೀಡಲಿದೆ. ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಬುಧವಾರ ಬೆಳಗಿನ ಜಾವ ಸಶಸ್ತ್ರ ಪಡೆಗಳು ದಾಳಿ ನಡೆಸಿದ ಪಹಲ್ಗಾಮ್ ದಾಳಿಗೆ ಭಾರತದ ಮಿಲಿಟರಿ ಪ್ರತೀಕಾರವಾದ ‘ಆಪರೇಷನ್ ಸಿಂಧೂರ್’ ಬಗ್ಗೆ ಮಾಹಿತಿ ನೀಡಲು ರಕ್ಷಣಾ ಸಚಿವಾಲಯ ನವದೆಹಲಿಯಲ್ಲಿ 10 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದೆ. ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ) ದಲ್ಲಿನ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ನಿಖರವಾದ ದಾಳಿ ನಡೆಸಿದ ನಂತರ ಪ್ರಧಾನಿ ನರೇಂದ್ರ ಮೋದಿ ರಾತ್ರಿಯಿಡೀ ‘ಆಪರೇಷನ್ ಸಿಂದೂರ್’ ಅನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಿದ್ದಾರೆ. ಎಲ್ಲಾ ಒಂಬತ್ತು ಗುರಿಗಳ ಮೇಲೆ ದಾಳಿ ಯಶಸ್ವಿಯಾಗಿದೆ.

Leave a Reply

Your email address will not be published. Required fields are marked *