ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ತರಗತಿಯ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಶಿಸ್ತು ಬದ್ಧವಾಗಿ ಅಧ್ಯಯನವನ್ನು ಕೈಗೊಂಡು ಸಾಧಕ ವಿದ್ಯಾರ್ಥಿಗಳಿಗಾಗಿ ಮೂಡಿಬರಬೇಕು.ಆದಕ್ಕಾಗಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನ ಮಾಡಬೇಕೆಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ರಮೇಶ್ ಎಸ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಕಲಿಕೆಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿಯ ಕುರಿತು ಮಾತನಾಡಿದರು. ಭೌತಶಾಸ್ತ್ರ ಉಪನ್ಯಾಸಕ ಸುರೇಶ್ ವಾಗ್ಲೆ ಕಾಲೇಜಿನ ನೀತಿ ನಿಯಮಗಳ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು. ರಸಾಯನಶಾಸ್ತ್ರ ಉಪನ್ಯಾಸಕ ಲಿಂಗಪ್ಪ ಪೂಜಾರಿ ಧನ್ಯವಾದ ಅರ್ಪಿಸಿದರು.ರಾಜ್ಯಶಾಸ್ತ್ರ ಉಪನ್ಯಾಸಕ ಪದ್ಮಕುಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.