IMG 20240728 WA0000IMG 20240728 WA0000

ಸಂವಿಧಾನದ ಆಶಯ ಮತ್ತು ಗುರಿಯನ್ನು ವಿವರಿಸುವ,ಸಂವಿಧಾನದ ಮುಕುಟದಂತಿರುವ ಸಂವಿಧಾನ ಪೀಠಿಕೆ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಎಲ್ಲಾ ಸರಕಾರಿ ಇಲಾಖೆ,ಕಚೇರಿ, ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳಲ್ಲಿ ಅಳವಡಿಸಬೇಕು ಹಾಗೂ ಇದರಿಂದಾಗಿ ಸಂವಿಧಾನದ ಜಾಗೃತಿ ಮೂಡಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪುತ್ತೂರಿನ ಸುದಾನ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೇ ವಿಜಯ ಹಾರ್ವೀನ್ ನೇತೃತ್ವದ ನಿಯೋಗ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ರವರಿಗೆ ಮನವಿ ಸಲ್ಲಿಸಿದೆ.

ಈ ಸಂಧರ್ಭದಲ್ಲಿ ಪುತ್ತೂರಿನ ಸ್ವರ ಮಾಧುರ್ಯ ಬಳಗದ ಸಲಹೆಗಾರರಾದ ಜನಾರ್ದನ ಬಿ ರವರು ವಿಧಾನ ಸಭಾ ಅಧ್ಯಕ್ಷರಿಗೆ ಮನವಿ ಪತ್ರ ನೀಡಿದ್ದಾರೆ.

ಪತ್ರಕರ್ತ ಸಿ. ಶೇ ಕಜೇಮಾರ್,ಜಿಲ್ಲಾ ದಲಿತ ಸೇವಾ ಸಮಿತಿ ವಿಟ್ಲ ಇದರ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರಕಾಡ್, ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ,ಸಾಮಾಜಿಕ ಕಾರ್ಯಕರ್ತ ಮಹಮ್ಮದ್ ಬಡಗನ್ನೂರು ಮೊದಲಾದವರು ನಿಯೋಗದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಅಪಾರ ಸರ್ಕಾರಿ ವಕೀಲರಾದ ಮನೋರಾಜ್ ರಾಜೀವ, ಮಂಗಳೂರು ಮಹನಗರಪಾಲಿಕೆ ಪಾಲಿಕೆ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *