ಸುಬ್ರಹ್ಮಣ್ಯ ಜುಲೈ 27: ಬೈಕ್ ಸವಾರರು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಕೆಎಸ್‌ಆರ್‌ಟಿಸಿ ಬಸ್‌ನ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪ ವ್ಯಕ್ತವಾಗಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ಬಳದಿಂದ ಸುಬ್ರಹ್ಮಣ್ಯಕ್ಕೆ ಬರುವಾಗ ಘಟನೆ ನಡೆದಿದ್ದು, ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ ಹಾಗೂ ನಿಯಮ ಪಾಲಿಸದೆ ಬೈಕ್ ಚಲಾಯಿಸಿದ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಘಟನೆ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಯುವಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಯುವಕರನ್ನು ಪತ್ತೆ ಹಚ್ಚಿ ಠಾಣೆಗೆ ಕರೆಸಿ ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.

