ಸುಳ್ಯ ತಾಲೂಕು ಆಸ್ಪತ್ರೆಗೆ ನೂತನ ವೈದ್ಯಾಧಿಕಾರಿಯಾಗಿ ಈ ಹಿಂದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಇದೀಗ ಸುಳ್ಯ ತಾಲೂಕು ಆಸ್ಪತ್ರೆಗೆ ವರ್ಗಾವಣೆಗೊಂಡು ಬಂದು ಆಡಳಿತ ವೈದ್ಯಾಧಿಕಾರಿಯಾಗಿ ನಿಯುಕ್ತರಾಗಿರುವ ಶ್ರೀ ನವೀನ್ ಎಸ್ ಎನ್ ಅವರಿಗೆ ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ತಾಲೂಕು ಆಸ್ಪತ್ರೆಯಲ್ಲಿ ಭೇಟಿಯಾಗಿ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ಎಲ್ಲಾ ರೋಗಿಗಳಿಗೆ ಅತ್ಯುತ್ತಮ ಗುಣಮಟ್ಟದ ಸೇವೆಯನ್ನು ನೀಡಿ ಉತ್ತಮ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಜನರ ಪ್ರೀತಿಗೆ ಪಾತ್ರರಾಗುವಂತೆ ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಚೇತನ್ ಕಜೆಗದ್ದೆ, ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ ಎಂ ಜೆ, ಸುಳ್ಯ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಭವಾನಿಶಂಕರ ಕಲ್ಮಡ್ಕ, ಸುಳ್ಯ ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯರುಗಳಾದ ಶಹೀದ್ ಪಾರೆ, ಚಂದ್ರನ್ ಕೂಟೇಲು ಮತ್ತು ಅಬ್ದುಲ್ ರಜಾಕ್, ಯುವ ಕಾಂಗ್ರೆಸ್ ಸದಸ್ಯರಾದ ರಕ್ಷಿತ್ ಗೂನಡ್ಕ, ಪ್ರೇಮಾ ಹರೀಶ್ವರನ್ ಅಡ್ಯಡ್ಕ, ಪ್ರಕಾಶ್ ಅರಂತೋಡು, ಮತ್ತು ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯರಾದ ಬೋಜಪ್ಪ ನಾಯ್ಕ್ ಅಡ್ಕಾರು ಮತ್ತು ವಿಜಯಕುಮಾರ್ ಆಲೆಟ್ಟಿ ಉಪಸ್ಥಿತರಿದ್ದರು.


