ಸುಳ್ಯ: ಶಾಲಾ ಶಿಕ್ಷಣ ಇಲಾಖೆ (ಪ.ಪೂ )ಹಾಗೂ ಶಾರದಾ ಪ.ಪೂ ಕಾಲೇಜು ಸುಳ್ಯ ಇವರು ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಾಧನೆ ಮೆರೆದಿದ್ದಾರೆ.



ಇಲ್ಲಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ, ಹಂಝ ಕಾತೂನ್ ಇವರ ಸುಪುತ್ರ ಮಹಮ್ಮದ್ ಮುದಸಿರ್ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಯನ್ನು ಆಡಳಿತ ಮಂಡಳಿ, ಪ್ರಾoಶುಪಾಲರು, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.
🛒 Recommended for You:





