ಆಗಸ್ಟ್ 15: ಬೆಳ್ಳಾರೆ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ವತಿಯಿಂದ 78ನೇ ಸ್ವಾತಂತ್ರೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಎಸ್.ಡಿ.ಪಿ.ಐ ಬೆಳ್ಳಾರೆ ಬ್ಲಾಕ್ ಅಧ್ಯಕ್ಷರೂ ಸವಣೂರು ಗ್ರಾಮ ಪಂಚಾಯಿತಿ ಸದಸ್ಯರೂ ಆದ ಎಂ.ಎ.ರಫೀಕ್ ರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎಸ್ ಡಿ ಪಿ ಐ ಬೆಳ್ಳಾರೆ ಬ್ಲಾಕ್ ಕಾರ್ಯದರ್ಶಿ ಹಮೀದ್ ಮರಕ್ಕಡ ಸ್ವಾಗತಿಸಿ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ತಂಬಿನಮಕ್ಕಿ ವಂದಿಸಿದರು.