ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ, ಎಂ.ಆರ್‌.ರವಿಕುಮಾರ್‌ ಅವರನ್ನು ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಇದಕ್ಕಿಂತ ಮೊದಲು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಡಾ.ರಾಜೇಂದ್ರ ಕೆ.ವಿ. ಅವರು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದು, ಪ್ರಭಾರ ಜಿಲ್ಲಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್‌ ಅವರು ಕಾರ್ಯ ನಿರ್ವಹಿಸಿದ್ದರು. ಇದೀಗ‌ ನೂತನ ಜಿಲ್ಲಾಧಿಕಾರಿಯ‌ ನೇಮಕವಾಗಿದೆ.

ರವಿಕುಮಾರ್ ಇವರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದರು. 2012 ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಆಗಿದ್ದಾರೆ.

1998ರ ಬ್ಯಾಚಿನ ಕೆಎಎಸ್ ಅಧಿಕಾರಿಯಾದ ರವಿಕುಮಾರ್ ತುಮಕೂರು ಉಪ ವಿಭಾಗಾಧಿಕಾರಿಯಾಗಿ, ಕರ್ನಾಟಕ ಗೃಹ ಮಂಡಳಿ ಭೂ ಸ್ವಾಧೀನಾಧಿಕಾರಿಯಾಗಿ, ಮುಡಾ ಕಾರ್ಯದರ್ಶಿಯಾಗಿ, ಬೆಂಗಳೂರು ಮೆಡಿಕಲ್ ಕಾಲೇಜು ಮುಖ್ಯ ಆಡಳಿತಾಧಿಕಾರಿಯಾಗಿ, ರಾಜೀವ್ ಗಾಂಧಿ ರೂರಲ್ ಹೌಸಿಂಗ್ ಕಾರ್ಪೊರೇಷನ್ ಪ್ರಧಾನ ವ್ಯವಸ್ಥಾಪಕರಾಗಿ ಹಾಗೂ ಬೆಳಗಾವಿ ನಗರ ಪಾಲಿಕೆ ಆಯುಕ್ತರಾಗಿ ಆಗಿ ಸೇವೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ