Advertisement

ಪುತ್ತೂರು: ಪಟಾಕಿ ಶೇಖರಿಸಿಟ್ಟಿದ್ದ ಗೋದಾಮಿಗೆ ಬೆಂಕಿ ತಗುಲಿ ಅವಘಡ ಸಂಭವಿಸಿದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಒಂದು ಕಟ್ಟಡವೊಂದರಲ್ಲಿ ನಡೆದಿದೆ. ಈ ಘಟನೆಯಿಂದಾಗಿ ಪಟಾಕಿಗಳು ಸ್ಫೋಟಗೊಂಡು ಸ್ಥಳದಲ್ಲಿ ಹೊಗೆ ತುಂಬಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಯಿಂದ ಓರ್ವ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ