ಆಗಸ್ಟ್ 15, ಸುಳ್ಯ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ಗಾಂಧಿನಗರದಲ್ಲಿ ನಡೆಯಿತು.
ಸುಳ್ಯ ಬ್ಲಾಕ್ ಉಪಾಧ್ಯಕ್ಷರಾದ ಸಲೀಂ ದರ್ಕಾಸ್
ಧ್ವಜಾರೋಹಣವನ್ನು ನೆರವೇರಿಸಿದರು.
ಎಸ್.ಡಿ.ಪಿ.ಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮೀತಿ ಉಪಾಧ್ಯಕ್ಷರಾದ ಅಬ್ದುಲ್ ಕಲಾಂ ರವರು ಸ್ವಾತಂತ್ರ್ಯ ಸಂದೇಶ ನೀಡಿದರು.
ಅಡ್ವಕೇಟ್ ರಶೀದ್ ಸುಳ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆಯಲ್ಲಿ ಸುಳ್ಯ ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಪ್ರಗತಿ ಅಚ್ಚು, ಉಪಸ್ಥಿತರಿದ್ದರು.
ಕೋಶಾಧಿಕಾರಿಯವರಾದ ಸಿದ್ದಿಕ್ ಕೊಡಿಯಮ್ಮೆ ಸ್ವಾಗತ ಮಾಡಿ, ಬ್ಲಾಕ್ ಜೊತೆ ಕಾರ್ಯದರ್ಶಿ ಸುಹೈಲ್ ವಂದನಾರ್ಪಣೆ ಮಾಡಿದರು.