ಕಲ್ಲಿಕೋಟೆ: ದೇಶಾದ್ಯಂತ ಕಾಂತಾರ ಸಿನಿಮಾ ಹವಾ ಸೃಷ್ಟಿ ಮಾಡಿದೆ. ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್‌ ಆಫೀಸ್‌ನಲ್ಲಿ ದೂಳೆಬ್ಬಿಸ್ತಿದೆ. ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ‘ವರಾಹ ರೂಪಂ’ ಹಾಡಿಗೆ ವಿವಾದ ಸುತ್ತಿಕೊಂಡಿತ್ತು.

ಈ ಹಾಡನ್ನು ಕಾಂತಾರ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಮಲಯಾಳಂ ಭಾಷೆಯ ‘ನವರಸಂ’ ಹಾಡಿನಿಂದ ಇದನ್ನು ನಕಲಿ ಮಾಡಿದ್ದಾರೆ ಎಂಬ ಆರೋಪ ಎದುರಾಗಿದ್ದು. ಈ ಸಂಬಂಧ ಮಲಯಾಳಂನ  ‘ತೈಕ್ಕುಡಂ ಬ್ರಿಡ್ಜ್’ ಚಿತ್ರತಂಡ ಕೋರ್ಟ್ ಮೆಟ್ಟಿಲೇರಿತ್ತು. ಈ ಕುರಿತು ಇಂದು ವಿಚಾರಣೆ ನಡೆಸಿದ ಕೇರಳದ ಪಾಲಕ್ಕಾಡ್ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ವರಹಾ ರೂಪಂ ಹಾಡಿಗೆ ತಡೆಯಾಜ್ಞೆ ನೀಡಿದೆ. ಮುಂದಿನ ಆದೇಶದವರೆಗೆ ಹಾಡನ್ನು ಪ್ಲೇ ಮಾಡದಂತೆ, ಸ್ಟ್ರೀಮಿಂಗ್ ಮಾಡದಂತೆ ಅಥವಾ ಸಾರ್ವಜನಿಕರಿಗೆ ವಿತರಿಸದಂತೆ ನಿರ್ಮಾಪಕ, ನಿರ್ದೇಶಕ, ಸಂಗೀತ ಸಂಯೋಜಕ ಮತ್ತು ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಿಗೆ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ ಎಂದು ಮಾತೃಭೂಮಿಯ ವರದಿ ತಿಳಿಸಿದೆ. ಈ ಹಿಂದೆ ಇದೇ ಈ ಕೇಸ್ ವಿಚಾರಣೆ ನಡೆಸಿದ ಕೇರಳದ ಕೋಝಿಕೋಡ್ ನ್ಯಾಯಾಲಯ ವರಾಹ ರೂಪಂ ಹಾಡಿಗೆ ತಡೆಯಾಜ್ಞೆ ನೀಡಿತ್ತು. ಈ ವಿಚಾರವನ್ನು ‘ತೈಕ್ಕುಡಂ ಬ್ರಿಡ್ಜ್’ ಚಿತ್ರತಂಡವೇ ತನ್ನ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿತ್ತು. ಕಾಂತಾರಾ ಸಿನಿಮಾದ ವರಾಹ ರೂಪಂ ಎನ್ನುವ ಫೇಮಸ್ ಟ್ಯೂನ್ ಅನ್ನು 5 ವರ್ಷ ಹಳೆಯ ಮಲಯಾಳಂ ಸಿನಿಮಾದಿಂದ ಕದ್ದಿದ್ದಾರೆ ಅಂತ ಚರ್ಚೆ ಶುರುವಾಗಿತ್ತು. ಈ ಹಾಡಿನ ಮೇಲೆ ಕೃತಿಚೌರ್ಯದ ಆರೋಪ ಕೇಳಿಬಂದಿತ್ತು . ಸಂಗೀತ ನಿರ್ದೇಶಕ ಅಜನೀಶ್ ಬಿ. ಲೋಕನಾಥ್ ಅವರು ಮಲಯಾಳಂ ಭಾಷೆಯ ‘ನವರಸಂ’ ಹಾಡಿನಿಂದ ಇದನ್ನು ಕಾಪಿ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ಹಾಗಾಗಿ ಈ ಹಾಡನ್ನು ಒಳಗೊಂಡಿದ್ದ ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್’ ತಂಡದವರು ಕೇಸ್ ಹಾಕಲು ನಿರ್ಧರಿಸಿದ್ದರು. ಇನ್ನು ಕಾಂತಾರ ತಂಡದ ವಿರುದ್ಧ ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್’ ತಂಡ ಬೇಸರ ವ್ಯಕ್ತಪಡಿಸಿತ್ತು. ‘ನಾವು ನಮ್ಮ ಕೇಳುಗರಿಗೆ ತಿಳಿಸುವುದೇನೆಂದರೆ, ಯಾವುದೇ ರೀತಿಯಲ್ಲೂ ‘ತೈಕ್ಕುಡಂ ಬ್ರಿಡ್ಜ್’ ತಂಡವು ‘ಕಾಂತಾರ’ ಸಿನಿಮಾ ಜೊತೆ ಸಹಯೋಗ ಹೊಂದಿಲ್ಲ. ವರಾಹ ರೂಪಂ ಮತ್ತು ನವರಸಂ ಹಾಡುಗಳ ನಡುವೆ ಇರುವ ಸಾಮ್ಯತೆಯು ಕಾಪಿರೈಟ್ ಕಾನೂನಿನ ಸ್ಪಷ್ಟ ಉಲ್ಲಂಘನೆ ಆಗಿದೆ. ಇದಕ್ಕೆ ಕಾರಣವಾದವರ ವಿರುದ್ಧ ನಾವು ಕಾನೂನಿನ ಕ್ರಮಕ್ಕೆ ಒತ್ತಾಯಿಸುತ್ತೇವೆ’ ಎಂದು ‘ತೈಕ್ಕುಡಂ ಬ್ರಿಡ್ಜ್’ ತಂಡ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿತ್ತು.

Leave a Reply

Your email address will not be published. Required fields are marked *