Advertisement
ಬಂಟ್ವಾಳ : ಟಿಪ್ಪರ್ ಲಾರಿ ಹಾಗೂ ಅಂಬ್ಯುಲೆನ್ಸ್ ವಾಹನದ ನಡುವೆ ಡಿಕ್ಕಿಯಾದ ಘಟನೆ ಮೆಲ್ಕಾರ್ ಸಮೀಪದ ನರಹರಿ ಎಂಬಲ್ಲಿ ರಾತ್ರಿ ವೇಳೆ ನಡೆದಿದೆ. ಘಟನೆಯಿಂದ ಯಾವುದೇ ಹಾನಿ ಸಂಭವಿಸಿಲ್ಲ.

ಸುಳ್ಯ ಕೆ.ವಿ.ಜಿ.ಆಸ್ಪತ್ರೆಗೆ ಸೇರಿದ ಆಂಬ್ಯುಲೆನ್ಸ್ ಇದಾಗಿದ್ದು, ರೋಗಿಯೋರ್ವರನ್ನು ಕೆ.ವಿ.ಜಿ.ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಈ ಘಟನೆ ನಡೆದಿದೆ. ದಿವ್ಯ ರೂಪ ಗುತ್ತಿಗೆ ಸಂಸ್ಥೆಗೆ ಸೇರಿದ ಲಾರಿಯೊಂದು ಎದುರು ಕಡೆಯಿಂದ ಬರುತ್ತಿದ್ದು ಹಠಾತ್ತನೆ ಬಲ ಬದಿಗೆ ಲಾರಿ ಚಾಲಕ ಚಾಲನೆ ಮಾಡಿದ್ದಾನೆ, ಈ ಸಂಧರ್ಭದಲ್ಲಿ ಅಪಘಾತ ಸಂಭವಿಸಿದೆ, ಅದೃಷ್ಟವಶಾತ್ ಯಾವುದೇ ಅಹಿತಕರ ನಡೆದಿಲ್ಲ

Advertisement