Advertisement
ಕಳೆದ ರಾತ್ರಿ ಜಾಲ್ಸೂರು ಗ್ರಾಮದ ಅಡ್ಕಾರ್ ನಲ್ಲಿ ಬಸ್ ಹಾಗೂ ಬಜಾಜ್ ಪಲ್ಸರ್ ಬೈಕ್ ಮಧ್ಯೆ ನಡೆದ ಅಪಘಾತ ದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಕಬಕದ ಬೊಳಿಯಮೂಲೆ ನಿವಾಸಿ ರೋಹಿತ್ ರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ರೋಹಿತ್ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.

Advertisement