ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.
ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಫರಂಗಿಪೇಟೆ ಹತ್ತನೇ ಮೈಲಿ ಕಲ್ಲು ಬಳಿ ಬಸ್ ಪಲ್ಟಿಯಾಗಿದೆ. ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ, ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದಲ್ಲಿ ಕಂಡ ತಾಂತ್ರಿಕ ದೋಷಗಳಿಂದ ಅಪಘಾತ ಸಂಭವಿಸಿಬಹುದು ಎಂಬುದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಘಟನೆಯಿಂದ ಗಾಯಗೊಂಡವರ ಹೆಸರು ವಿಳಾಸದ ಮಾಹಿತಿ ಯಾವುದೇ ಲಭ್ಯವಾಗಿಲ್ಲ. ಗಾಯಗೊಂಡ ಎಲ್ಲರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಯುವಕರು ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ.