Advertisement
ಮಂಗಳೂರು: ಕರ್ನಾಟಕದ ಕರಾವಳಿ ಭಾಗದ ಪ್ರಮುಖ ಜಾನಪದ ಸಂಸ್ಕೃತಿಯಾದ ಕಂಬಳಕ್ಕೆ ಇನ್ನೂ ಹೆಚ್ಚಿನ ಸ್ಥಾನಮಾನ ದೊರೆಯುವ ಆಶಾಭಾವನೆ ದೊರೆತಿದೆ. ಈ ಕಂಬಳವನ್ನು ಕೇಂದ್ರ ಸರ್ಕಾರದ ಪ್ರವಾಸೋದ್ಯಮ ನೀತಿಯ ಭಾಗವಾಗಿ ಸೇರ್ಪಡೆಗೊಳ್ಳಲು ಒಂದು ಹೆಜ್ಜೆ ಮುಂದಿಡಲಾಗಿದೆ. ಕೇಂದ್ರ ಸರ್ಕಾರದ ಪ್ರವಾಸೋದ್ಯಮ ನೀತಿಯಲ್ಲಿ ಕಂಬಳವನ್ನು ಸೇರಿಸಲು ಎಲ್ಲಾ ಕ್ರಮಕೈಗೊಳ್ಳುವ ಕುರಿತು ಸ್ವತಃ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಭರವಸೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಸಚಿವ ಶ್ರೀಪಾದ ಯೆಸ್ಸೋ ನಾಯಕ್ ಈ ಕುರಿತು ಉಳ್ಳಾಲದಲ್ಲಿ ಮಾಹಿತಿ ನೀಡಿದ್ದಾರೆ. ಉಳ್ಳಾಲದಲ್ಲಿ ಕಂಬಳ ಗದ್ದೆಯೊಂದರ ಕಾಮಗಾರಿಯನ್ನು ವೀಕ್ಷಿಸಿದ ಅವರು ಈ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.

Advertisement