ದ್ವಿಚಕ್ರ ವಾಹನ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ಮಾಡಿದ ಪರಿಣಾಮ, ಯುಕನೋರ್ವ ಗಾಯಗೊಂಡ ಘಟನೆ ಇಂದು ಮುಂಜಾನೆ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಧನುಷ್(30) ಗಾಯಗೊಂಡವರು.ಕುಂಬ್ರ ಪೆಟ್ರೋಲ್ ಬಂಕ್ ನಲ್ಲಿ ಮ್ಯಾನೇಜರ್ ಆಗಿರುವ ಧನುಷ್ ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಪೆಟ್ರೋಲ್ ಬಂಕ್ ಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕುರುಂಜ ಮಣ್ಣಾಪು ತಲುಪಿದಾಗ ಏಕಾಏಕಿ ಕಾಡು ಹಂದಿಯೊಂದು ಧನುಷ್ ಚಲಾಯಿಸುತ್ತಿದ್ದ ಸ್ಕೂಟರ್ ಮೇಲೆ ಎರಗಿದೆ. ಈ ವೇಳೆ ಧನುಷ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾನೆ. ಬಳಿಕ ಕಾಡುಹಂದಿ ಧನುಷ್ ಮೇಲೆ ಎರಗಿದ್ದು, ಅವರ ಬಲ ಕೈಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ಇದರೊಂದಿಗೆ ಆತನ ಇತರ ದೇಹದ ಭಾಗಗಳಿಗೆ ಗಾಯಗೊಳಿಸಿದೆ. ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
-
ಒಸ್ಟ್ರಾವಾದಲ್ಲಿ ಮತ್ತೊಂದು ಚಿನ್ನದ ಪದಕ ಗೆದ್ದ ಭಾರತದ `ಜಾವೆಲಿನ್ ತಾರೆ ನೀರಜ್ ಚೋಪ್ರಾ
ಮಂಗಳವಾರ ನಡೆದ ಏಕದಿನ ಸ್ಪರ್ಧೆಯಲ್ಲಿ 85.29 ಮೀಟರ್ ದೂರ ಎಸೆಯುವ ಮೂಲಕ ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಒಸ್ಟ್ರಾವಾ ಗೋಲ್ಡನ್ ಸ್ಪೈಕ್ 2025 ರ ಕೂಟದಲ್ಲಿ ಜಾವೆಲಿನ್ ಥ್ರೋ ಪ್ರಶಸ್ತಿಯನ್ನು ಗೆದ್ದರು. ಆರು ಸುತ್ತುಗಳ ನಂತರ 85.29 ಮೀಟರ್ ದೂರ ಎಸೆದು ಅಜೇಯರಾಗಿ ಉಳಿದ ನೀರಜ್, ಈ ಋತುವಿನಲ್ಲಿ ಮತ್ತೊಂದು ಅತ್ಯುತ್ತಮ ಪೋಡಿಯಂ ಫಿನಿಶ್ ಗಳಿಸುವ ಮೂಲಕ ಪ್ರತಿಷ್ಠಿತ ಕೂಟದಲ್ಲಿ ಒಂದು ಎಸೆತ ಬಾಕಿ ಇರುವಾಗಲೇ ಗೆಲುವು ಸಾಧಿಸಿದರು. ಕೆಲವು ದಿನಗಳ ಹಿಂದೆ…
-
ಅಡುಗೆ ಸಿಲಿಂಡರ್ ಸ್ಪೋಟ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಸಿಸಿಟಿವಿ ವಿಡಿಯೋ…!!
ಸಾಮಾಜಿಕ ಜಾಲತಾಣದಲ್ಲಿ ಅಡುಗೆ ಸಿಲಿಂಡರ್ ಒಂದು ಸ್ಪೋಟಗೊಂಡ ವಿಡಿಯೋ ವೈರಲ್ ಆಗಿದೆ. ಮನೆಯೊಂದರಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸದ್ಯ ವೈರಲ್ ಆಗಿದೆ. ಘಟನೆ ಸಿಸಿಟಿವಿಯ ಸಮಯದ ಪ್ರಕಾರ ಜೂನ್ 18 ರಂದು ನಡೆದಿದೆ ಎಂದು ಹೇಳಲಾಗಿದ್ದು, ಎಲ್ಲಿ ನಡೆದಿದೆ ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಆದರೆ ಈ ವಿಡಿಯೋ ಮಾತ್ರ ಎಲ್ಲರಿಗೂ ಶಾಕ್ ನೀಡಿದೆ. ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿದೆ. ಈ ವೇಳೆ ಮಹಿಳೆಯೊಬ್ಬರು ಸಿಲಿಂಡರನ್ನು ಅಡುಗೆ ಮನೆಯಿಂದ ಮನೆಯ ಹಾಲ್ ಗೆ ತಂದಿದ್ದಾರೆ. ಈ ವೇಳೆಯೂ…
-
ಸುಳ್ಯ: ತಾಲೂಕು ಪಂಚಾಯತ್ ಸಭಾಭವನದಲ್ಲಿ ಯೋಗ ದಿನಾಚರಣೆ
11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ತಾಲೂಕು ಪಂಚಾಯತ್ ಸುಳ್ಯ, ಯುವಜನ ಸಂಯುಕ್ತ ಮಂಡಳಿ ಸುಳ್ಯ, ಪ್ರೆಸ್ ಕ್ಲಬ್ ಸುಳ್ಯ, ಜರ್ನಲಿಸ್ಟ್ ಯೂನಿಯನ್ ಸುಳ್ಯ, ಕಾರ್ಯನಿರತ ಪತ್ರಕರ್ತರ ಸಂಘ ಸುಳ್ಯ, ಪಯಸ್ವಿನಿ ಯುವಕ ಮಂಡಲ ಕೇರ್ಪಳ ಇದರ ಆಶ್ರಯದಲ್ಲಿ ನಡೆದ ಯೋಗ ದಿನಾಚರಣೆ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಹಿರಿಯ ಪತ್ರಕರ್ತ ಗಂಗಾಧರ್ ಮಟ್ಟಿ ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಪಂಚಾಯತ್ ಸಿ.ಒ ರಾಜಣ್ಣ, ಸುಳ್ಯ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ, ಯೋಗ…