ಸುಳ್ಯ ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ ಮಹಿಳಾ ಸಬಲೀಕರಣ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯುವ ರೆಡ್ ಕ್ರಾಸ್ ಘಟಕ, ಆಂತರಿಕ ಗುಣಮಟ್ಟ ಖಾತರಿ ಕೋಶ ಮತ್ತು ಸುಳ್ಯದ ಇನ್ನರ್ ವೀಲ್ ಕ್ಲಬ್ ಇವುಗಳ ಸಹಯೋಗದಲ್ಲಿ ರಕ್ತಹೀನತೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯದ ಪ್ರಸೂತಿ ತಜ್ಞೆ ಡಾ. ವೀಣಾ ರಕ್ತಹೀನತೆಯ ಕಾರಣಗಳು ಮತ್ತು ಪರಿಹಾರದ ಬಗ್ಗೆ ಮಾಹಿತಿ ನೀಡಿದರು. ಸಮಾರಂಭದ ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ , ಐ.ಕ್ಯು,ಎ.ಸಿ ಸಂಯೋಜಕ ವಿವೇಕ್ ಪಿ, ಎನ್ಎಸ್ಎಸ್ ಕಾರ್ಯಕ್ರಮಾ ಧಿಕಾರಿ ಚಂದ್ರಶೇಖರ ಬಿಳಿನೆಲೆ, ಇನ್ನರ್ ವೀಲ್ ಕ್ಲಬ್ ನ ಅಧ್ಯಕ್ಷೆ ಚಿಂತನ ಸುಬ್ರಮಣ್ಯ ಉಪಸ್ಥಿತರಿದ್ದರು.
ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಸಂಯೋಜಕ ಬಿಂದು ಕೆ ವಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಇನ್ನರ್ ವೀಲ್ ಕ್ಲಬ್ಬಿನ ಉಪಾಧ್ಯಕ್ಷೆ ಜಯಮಣಿ ಐ.ಬಿ ವಂದಿಸಿದರು. ವಿದ್ಯಾರ್ಥಿನಿ ದಿಲಾನ್ ಕಾರ್ಯಕ್ರಮ ನಿರೂಪಿಸಿದರು.