ಕಾಂತಾರ: ಚಿತ್ರತಂಡಕ್ಕೆ ದೊಡ್ಡ ರಿಲೀಫ್ ಸಿಕ್ಕಿದೆ. ಕಾಂತಾರ ಸಿನಿಮಾ ತಂಡಕ್ಕೆ ಕೇರಳದ ಕೋರ್ಟಿನಲ್ಲಿ ಗೆಲುವು ಸಿಕ್ಕಿದ್ದು ವರಾಹ ರೂಪಂ ಹಾಡಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಕೇರಳದ ಮ್ಯೂಸಿಕ್ ಬ್ಯಾಂಡ್ ತೈಕ್ಕುಡಂ ಬ್ರಿಡ್ಜ್ ಹಾಡಿನ ಪ್ರಸಾರ ತಡೆಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿತ್ತು. ಇದನ್ನು ವಜಾಗೊಳಿಸಿ ಕೋಜಿಕ್ಕೋಡ್ ಕೋರ್ಟ್ ಆದೇಶ ಹೊರಡಿಸಿದೆ.

ಅ.29ರಂದು ಹಾಡನ್ನು ಪ್ರಸಾರ ಮಾಡದಂತೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಭಾರೀ ಜನಪ್ರಿಯ ಆಗಿದ್ದ ವರಾಹರೂಪಂ ಹಾಡಿನ ಬಗ್ಗೆ ವಿವಾದ ಉಂಟಾಗಿತ್ತು. ಹಾಡು ನಕಲು ಮಾಡಿದ್ದಾರೆಂದು ಇದರ ವಿರುದ್ಧ ಕೋರ್ಟ್ ನಲ್ಲಿ ಪ್ರಶ್ನೆ ಮಾಡಲಾಗಿತ್ತು.

ವಾದ – ಪ್ರತಿವಾದ ಆಲಿಸಿದ ನ್ಯಾಯಾಲಯ ಈಗ ಆದೇಶ ನೀಡಿದ್ದು ಹಾಡನ್ನು ಪ್ರಸಾರ ಮಾಡಲು ಅನುಮತಿ ನೀಡಿದೆ. ವರಾಹರೂಪಂ ಹಾಡಿನ ಪ್ರಸಾರಕ್ಕೆ ಯಾವುದೇ ಅಡ್ಡಿಯಿಲ್ಲವೆಂದು ತೀರ್ಪು ನೀಡಲಾಗಿದ್ದು ಇನ್ನು ಕಾಂತಾರ ಸಿನಿಮಾದಲ್ಲಿ ವರಾಹ ರೂಪಂ ಒರಿಜಿನಲ್ ಟ್ಯೂನ್ನಲ್ಲಿ ಪ್ರಸಾರ ಮಾಡಬಹುದಾಗಿದೆ ಎಂದು ತಿಳಿದುಬಂದಿದೆ.