ಸುಳ್ಯ ನಗರವನ್ನೇ ಬೆಚ್ಚಿಬೀಳಿಸಿದ ಕೊಲೆ ಪ್ರಕರಣದ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ. ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪತಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪಶ್ಚಿಮ ಬಂಗಾಲದ ಪೊಲೀಸರ ಸಹಾಯದಿಂದ ಸುಳ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಹತ್ಯೆಗೈದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾಗಿರುವುದಾಗಿ ಹೇಳ ಲಾಗಿದೆ. ಈತ ಕಳೆದ ಆರು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎರಡು ದಿನಗಳ ಹಿಂದೆ ಊರಿಗೆ ತೆರಳುತ್ತೇನೆ ಎಂದು ಹೊಟೇಲ್ ನವರಲ್ಲಿ ಹೇಳಿ ಊರಿಗೆ ತೆರಳಿದ್ದ. ಈ ಕುರಿತು ಪಕ್ಕದ ರೂಂ ನವರಿಗೆ ಸಂಶಯ ಮೂಡಿ ಪೋಲಿಸರಿಗೆ ವಿಷಯ ತಿಳಿಸಿ ಪೊಲೀಸರು ಬಾಡಿಗೆ ಮನೆಗೆ ಬಂದು ಬಾಗಿಲು ಒಡೆದು ಪರಿಶೀಲಿಸುವಾಗ ಮನೆಯೊಳಗೆ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಶಂಕಿತ ಈ ಆರೋಪಿ ಪರಾರಿಯಾಗಿದ್ದು, ಈ ಕುರಿತಂತೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಬಂಧಿಸದ್ದಾರೆ ಎಂದು ತಿಳಿದುಬಂದಿದೆ.