ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಗುಡ್ಲವಲ್ಲೇರು ಇಂಜಿನಿಯರಿಂಗ್ ಕಾಲೇಜಿನ ಬಾಲಕಿಯರ ಹಾಸ್ಟೆಲ್ ಸ್ನಾನಗೃಹಗಳಲ್ಲಿ ಹಿಡನ್ ಕ್ಯಾಮರಾ ಇಟ್ಟಿರುವುದು ಪತ್ತೆಯಾಗಿದ್ದು, ದೇಶಾದ್ಯಂತ ಸಂಚಲನ ಮೂಡಿಸಿದೆ.
300ಕ್ಕೂ ಅಧಿಕ ವಿಡಿಯೋ ಬಾಯ್ಸ್ ಹಾಸ್ಟೆಲ್ಗೆ ರವಾನೆಯಾಗಿವೆ ಎನ್ನಲಾಗಿದೆ. ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿನಿಯರು, ಕಾಲೇಜು ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದು ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ.