ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ಟಿ.ಡಿ. ನಾಗರಾಜ್’ರನ್ನು ಕಾರ್ಕಳ ಪೊಲೀಸ್ ಠಾಣೆಗೆ ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಇವರ ಜೊತೆ ಹಲವು ಇನ್ಸ್ ಪೆಕ್ಟರ್‌ಗಳ ವರ್ಗಾವಣೆ ನಡೆದಿದೆ. ಕಳೆದ ಕೆಲವು ವರ್ಷಗಳಲ್ಲಿ ಬಂಟ್ವಾಳ ತಾಲೂಕಿನಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊದದಂತೆ ಶಾಂತಿ ನೆಲೆಸುವಲ್ಲಿ ಪ್ರಮುಖ ಪಾತ್ರ ವಹಿಸಿದವರಲ್ಲಿ ಟಿ.ಡಿ. ನಾಗರಾಜ್ ಕೂಡ ಒಬ್ಬರು.
ವಿಟ್ಲದಲ್ಲಿ ಎರಡು ಸಮುದಾಯಗಳ ಮಧ್ಯೆ ನಡೆದ ಗಲಾಟೆಯ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದ ಕೀರ್ತಿ ಹಾಗೂ ಸ್ಥಳದಲ್ಲಿ ಜಮಾಯಿಸಿದ್ದ ಕಾರ್ಯ ಕರ್ತರಿಗೆ ಮಾತಿನ ಮೂಲಕ ಎಚ್ಚರಿಕೆ ನೀಡಿದ ವಿಡಿಯೋ ಒಂದು ಸಖತ್ ವೈರಲ್ ಕೂಡಾ ಆಗಿತ್ತು.
ಹಿಂದೂ ಸಂಘಟನೆಯ ಪ್ರಮುಖ ಸುರೇಂದ್ರ ಬಂಟ್ವಾಳ ಅವರ ಕೊಲೆ ಪ್ರಕರಣದ ನೈಜ ಆರೋಪಿಗಳ ಬಂಧನ ಸಹಿತ, ಅನೇಕ ಕ್ಲಿಷ್ಟಕರವಾದ ಪರಿಸ್ಥಿತಿಯಲ್ಲಿ ಕೆಲಸ ಮಾಡಿದ ಅನುಭವಿ ಪೋಲೀಸ್ ಅಧಿಕಾರಿ. ಇತ್ತೀಚಿಗೆ ಉಪ್ಪಿನಂಗಡಿಯಲ್ಲಿ ನಡೆದ ಗಲಭೆ ನಿಯಂತ್ರಣದಲ್ಲೂ ಇವರ ಪಾತ್ರ ಪ್ರಮುಖವಾಗಿತ್ತು. ಆ ಬಳಿಕ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಂಧನದಲ್ಲಿ ಟಿ.ಡಿ. ನಾಗರಾಜ್ ಪಾತ್ರ ವಹಿಸಿದ್ದರು. ಜಿಲ್ಲೆ ಅಲ್ಲದೆ ಹೊರ ಜಿಲ್ಲೆಯಲ್ಲೂ ಕೆಲಸ ಮಾಡಿ ಹೆಸರು ಗಳಿಸಿದ ಖಡಕ್ ಪೋಲೀಸ್ ಅಧಿಕಾರಿಯಾಗಿದ್ದಾರೆ.