ಓಮಾನ್‌ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ (Road Accident) ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಪ್ರವಾಸಕ್ಕೆ ಹೋಗಿದ್ದ ಕುಟುಂಬ ಹೈಮಾ ಪ್ರದೇಶದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಈ ವೇಳೆ ಒಮ್ಮೆಲೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನೊಳಗೆ ಸಿಲುಕಿದ ಕುಟುಂಬಸ್ಥರು ಸಜೀವ ದಹನವಾಗಿದ್ದಾರೆ. ಪವನಕುಮಾರ್ ತಹಶಿಲ್ದಾರ, ಪೂಜಾ, ವಿಜಯಾ, ಆದಿಶೇಷ ಮೃತ ದುರ್ದೈವಿಗಳು.
ಇಬ್ಬರು ಮಕ್ಕಳು, ತಾಯಿ ಹಾಗೂ ಅಳಿಯನ ಸಾವಾಗಿದೆ. ಮೃತರ ಶವವನ್ನು ಭಾರತಕ್ಕೆ ತರಲು ರಾಜ್ಯಸಭಾ ಈರಣ್ಣ ಕಡಾಡಿ ಮಾತುಕತೆ ನಡೆಸಿದ್ದಾರೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಪ್ರಹ್ಲಾದ್ ಜೋಶಿಗೆ ಮನವಿ ಮಾಡಿದ್ದಾರೆ.