Advertisement
ಖ್ಯಾತ ಯಕ್ಷಗಾನ ಮತ್ತು ತಾಳೆ-ಮದ್ದಳೆ ಕಲಾವಿದ, ಮಾಜಿ ಶಾಸಕರಾದ ಕುಂಬ್ಳೆ ಸುಂದರ ರಾವ್ (88) ಅವರು ಅ. 30 ಬುಧವಾರ ದಂದು ನಿಧನರಾಗಿದ್ದಾರೆ. ಯಕ್ಷಗಾನದ ತೆಂಕತಿಟ್ಟು ಶೈಲಿಯ ಕಲಾವಿದರಾಗಿದ್ದ ಇವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕೆಲಸ ನಿರ್ವಹಿಸಿದ್ದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಹಾಗೂ 1994 ರಿಂದ 1999 ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಯಕ್ಷಗಾನ ಕಲಾವಿದರೊಬ್ಬರು ನೇರವಾಗಿ ಮತದಾರರಿಂದಲೇ ಆರಿಸಲ್ಪಟ್ಟ ಪ್ರಪ್ರಥಮ ಶಾಸಕರೆಂಬ ಹೆಗ್ಗಳಿಕೆಗೆ ಕೂಡಾ ಪಾತ್ರರಾಗಿದ್ದರು. ಕಾಯರ್ಕಾಡಿ ಕುಞಿಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ನೇ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬಳೆಯಲ್ಲಿ ಜನಿಸಿದ್ದರು. ಯಕ್ಷಗಾನ ಪ್ರಿಯರು, ಕಲಾರಂಗದ ಇಡೀ ಸಮೂಹ ಅವರ ಅಗಲಿಕೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದೆ.

Advertisement