ಸುಳ್ಯ,ಬಶೀರ್ ಕಾರ್ಲೆ ನಿಧನ: ಎಸ್‌ಡಿಪಿಐ ಸಂತಾಪ
ಸುಳ್ಯ:1 ಸೆಪ್ಟೆಂಬರ್: ಕೆ.ಸಿ.ಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ಸದಸ್ಯ,ಅನ್ಸಾರಿಯ ಸಂಸ್ಥೆಯ ಬಹರೈನ್ ಸಮಿತಿಯ ಮಾಜಿ ಅಧ್ಯಕ್ಷರೂ ಆಗಿದ್ದ ಸುಳ್ಯ ನಿವಾಸಿ ಬಶೀರ್ ಕಾರ್ಲೆಯವರು ನಿಧನ ಹೊಂದಿದರು. ಇವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ಸಮಿತಿ ಅಧ್ಯಕ್ಷ ಮೀರಝ್ ಸುಳ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಜೈಭಾರತ್ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಹಾಗೂ ದುಲ್ಫ್‌ಕಾರ್ ದಫ್ ಅಸೋಸಿಯೇಷನ್ ಇದರ ಮಾಜಿ ಅಧ್ಯಕ್ಷರು ಸೇರಿದಂತೆ ಹಲವು ಸಂಘಸಂಸ್ಥೆಗಳಲ್ಲಿ ಪಧಾದಿಕಾರಿಯಾಗಿ ಸೇವೆ ಸಲ್ಲಿಸಿದ್ದ ಇವರ ಅಗಲುವಿಕೆಯು ಸಮುದಾಯಕ್ಕೆ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.
ಸೃಷ್ಟಿಕರ್ತನು ಇವರ ಪರಲೋಕ ಯಾತ್ರೆಯನ್ನು ಸುಗಮಗೊಳಿಸಲಿ.ಕುಟುಂಬಕ್ಕೆ ಮತ್ತು ಬಂದು ಬಳಗಕ್ಕೆ ಇವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲು ಪ್ರಾರ್ಥಿಸುತ್ತೇವೆ ಎಂದು ತಮ್ಮ ಸಂತಾಪ ಸೂಚಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ