ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ.