6ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಾಲೆಯಲ್ಲಿಯೇ ಕುಸಿದುಬಿದ್ದು ಹೃದಯಾಘಾದಿಂದ ಸಾವನ್ನಪ್ಪಿರುವ ಖೇದಕರ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಕಲಘಟಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮಕ್ತುಮ್ ಮಹ್ಮದ್ ರಫಿ ಮನಿಯಾರ್ ಎಂಬ (13) ವರ್ಷ ವಯಸ್ಸಿನ ಮೃತ ಬಾಲಕನಾಗಿದ್ದು, ಆತ ಕೆಲ ವರ್ಷಗಳಿಂದಲೇ ಹೃದಯ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.

ಶಾಲೆಯಲ್ಲಿ ಬಾಲಕ ಕುಸಿದುಬಿದ್ದ ತಕ್ಷಣವೇ ಆತನನ್ನು ಶಿಕ್ಷಕರು ಕಲಘಟಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ