Advertisement
ನವದೆಹಲಿ: ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 134 ಸ್ಥಾನಗಳನ್ನು ಪಡೆದು ಭರ್ಜರಿ ಜಯಭೇರಿ ಬಾರಿಸಿದೆ. ಕಳೆದ 15 ವರ್ಷಗಳ ಬಿಜೆಪಿ ಆಡಳಿತಕ್ಕೆ ತೆರೆ ಕಂಡಿದೆ. ಬಿಜೆಪಿ 103 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ 10 ಸ್ಥಾನಗಳನ್ನು ಪಡೆದು ತೃಪ್ತಿಪಟ್ಟುಕೊಂಡಿದೆ.

ಡಿಸೆಂಬರ್ 4 ರಂದು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. 2017 ರಲ್ಲಿ (ಅಂದಿನ) 270 ಮುನ್ಸಿಪಲ್ ವಾರ್ಡ್ ಗಳಲ್ಲಿ ಬಿಜೆಪಿ 181 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ AAP ಕೇವಲ 48 ಸ್ಥಾನಗಳನ್ನು ಗೆದ್ದುಕೊಂಡರೆ ಕಾಂಗ್ರೆಸ್ 30 ಸ್ಥಾನಗಳನ್ನು ಗಳಿಸಿತ್ತು. ಇದೀಗ ಎಲ್ಲಾ ಲೆಕ್ಕವನ್ನು ತಲೆ ಕೆಳಗಾಗಿಸುವಂತೆ ಎಎಪಿ ಭರ್ಜರಿಯಾಗಿ ಜಯಶಾಲಿಯಾಗಿದೆ.
Advertisement