ಕೋಲಾರ (ಡಿ.08): ಹೃದಯಾಘಾತದಿಂದ 7ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನಲ್ಲಿ ನಡೆದಿದೆ. ಜಯಶ್ರೀ (12) ಸಾವನ್ನಪ್ಪಿದ ದುರ್ದೈವಿಯಾಗಿದ್ದಾರೆ.

ವಿದ್ಯಾರ್ಥಿನಿ ಜಯಶ್ರೀ ಅವರು KGF ನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಓದುತ್ತಿದ್ರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಇಂದು ಹೃದಯಾಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿನಿ ಜಯಶ್ರೀ ಮುಳಬಾಗಿಲು ತಾಲೂಕಿನ ಊರುಕುಂಟೆ ಮಿಟ್ಟೂರು ಗ್ರಾಮದ ನಿವಾಸಿಯಾಗಿದ್ದಾರೆ. ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಸಲಾಯ್ತು ಬಳಿಕ ಮೃತದೇಹ ಹಸ್ತಾಂತರ ಮಾಡಲಾಗಿದೆ. ಸ್ಥಳಕ್ಕೆ ಕೆಜಿಎಫ್ ತಹಶೀಲ್ದಾರ್ ಸುಜಾತ, ದಲಿತ ಮುಖಂಡ ಬೆಳಮಾರನಹಳ್ಳಿ ಆನಂದ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ