ಅಹಮದಾಬಾದ್: ಗುಜರಾತ್ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಬಿಜೆಪಿಯ ಭೂಪೇಂದ್ರ ಪಟೇಲ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸುಮಾರು 200 ಸಾಧುಸಂತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಗುಜರಾತ್‌ನಲ್ಲಿದ್ದು, ಇಂದು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.ಗಾಂಧಿನಗರದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದ್ದು, ಸಮಾರಂಭಕ್ಕೆ ಮಾಡಿ ಸಿಎಂ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕೆಲವರಿಗೆ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿಗೂ ಆಹ್ವಾನ ನೀಡಲಾಗಿದ್ದು, ಆದರೆ, ಅವರಿಂದು ಬೆಳಗ್ಗೆ ಬೆಂಗಳೂರಿನಲ್ಲಿ ಜನತಾ ದರ್ಶನ ಮಾಡಿದ್ದು, ಗುಜರಾತ್‌ಗೆ ತೆರಳುವ ಕುರಿತು ಮಾಹಿತಿ ದೊರಕಿಲ್ಲ.

ಪ್ರಧಾನಿ ನರೇಂದ್ರ ಮೋದಿ, ನಿತಿನ್‌ ಗಡ್ಕರಿ ಸೇರಿದಂತೆ ಪ್ರಮುಖರು ಈ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಭೂಪೇಂದ್ರ ಪಟೇಲ್ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಗುಜರಾತ್‍ನ 18ನೇ ಮುಖ್ಯಮಂತ್ರಿಗೆ ರಾಜ್ಯಪಾಲ ಆಚಾರ್ಯ ದೇವವ್ರತ್ ಪ್ರಮಾಣವಚನ ಬೋಧಿಸಲಿದ್ದಾರೆ. ಯಡಿಯೂರಪ್ಪ ಶನಿವಾರವೇ ಗುಜರಾತ್‌ ರಾಜ್ಯ ತಲುಪಿದ್ದು, ಏಕತಾ ಪ್ರತಿಮೆಗೆ ಭೇಟಿ ನೀಡಿದ್ದರು. ಬಿಜೆಪಿ ಗುಜರಾತ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಅರ್ಜುನ್ ಮುಂಡಾ ಅವರೊಂದಿಗೆ ಪಕ್ಷದ ಕೇಂದ್ರ ವೀಕ್ಷಕರಾಗಿ ಯಡಿಯೂರಪ್ಪ ಭಾಗವಹಿಸಿದ್ದರು. ಭೂಪೇಂದ್ರ ಪಟೇಲ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ