ಹಾಸನ: ಕೂಲಿ ಕೆಲಸಕ್ಕೆಂದು ಪೋಷಕರ ಜೊತೆ ಬಂದಿದ್ದ ಬಾಲಕಿ, ತೋಟಕ್ಕೆ ಬಂದಿದ್ದಾಗ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸಮೂಹಿಕವಾಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಪೈಶಾಚಿಕ ಘಟನೆ ವರದಿಯಾಗಿದೆ. 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನು ಪೋಲಿಸರು ಬಂಧಿಸಲಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿನ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸಮೂಹಿಕವಾಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದು ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣ ಬಯಲಾಗಿದೆ. ಸದ್ಯ ಪೊಲೀಸರು ಮೂವರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಗರ್ಭಿಣಿಯಾದ ಬಳಿಕ ಪ್ರಕರಣ ಬಯಲಾಗಿದೆ. ಸಂತ್ರಸ್ತ ಬಾಲಕಿಗೆ ರಕ್ಷಣೆ ನೀಡಿ ಆರೋಪಿಗಳ ಬಂಧನಕ್ಕೆ ಕ್ರಮ ವಹಿಸಿರೋ ಮಕ್ಕಳ ರಕ್ಷಣಾ ಸಮಿತಿ ಸದಸ್ಯರು, ಪೋಷಕರು ಹಾಗು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರ ದೂರು ಆಧರಿಸಿ ಎಫ್.ಐ.ಆರ್ ದಾಖಲಿಸಿಕೊಂಡಿರುವ ಪೊಲೀಸರು ಪೋಕ್ಸೋ ಕಾಯ್ದೆಯಡಿ ಮೂವರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
