ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ ಕೆ.ಪಿ.ಶಿವಪ್ರಕಾಶ್ ರವರು ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಮಾರು 58 ವರ್ಷದ ಇವರು ಇತ್ತೀಚಿನ ಕೆಲ ಕಾಲದಿಂದೀಚೆಗೆ ಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಕಳೆದ ಸೋಮವಾರ ಮನೆಯಲ್ಲಿರುವಾಗ ಅವರಿಗೆ ಬ್ರೈನ್ ಹ್ಯಾಮರೇಜ್ ಆಯಿತೆನ್ನಲಾಗಿದೆ.

ಕೂಡಲೇ ಅವರನ್ನು ಮಹಾವೀರ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಇಂದು ಮಧ್ಯಾಹ್ನ ಅವರು ಕೊನೆಯುಸಿರೆಳೆದರು. ಮೃತದೇಹದ ಅಂತ್ಯಕ್ರಿಯೆ ಪುತ್ತೂರಿನ ಸ್ಮಶಾನದಲ್ಲಿ ನಡೆಯಿತು. ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ