ಸುಳ್ಯ ಡಿ.15: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಫಾರಮ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ನ ಉದ್ಘಾಟನಾ ಸಮಾರಂಭವು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಬಾಲಚಂದ್ರ ಗೌಡ ಈ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ಪಾಲಿಸಬೇಕಾದ ಕೆಲವು ಉಪಯುಕ್ತ ಮಾಹಿತಿಯನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಪೋಸ್ಟರ್ ಮೇಕಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ವರ್ಷದ ಬಿಬಿಎ ತರಗತಿಯ ವಿದ್ಯಾರ್ಥಿಗಳ ಒಟ್ಟು 12 ತಂಡಗಳಾಗಿ ಭಾಗವಹಿಸಿ ಪೋಸ್ಟರ್ ಗಳನ್ನು ತಯಾರಿಸಿ, ಕೊಟ್ಟಿರುವ ವಿಷಯದ ಕುರಿತು ಸಂಕ್ಷಿಪ್ತ ಕಿರು ಚಿತ್ರ ಹಾಗೂ ಪವರ್ ಪಾಯಿಂಟ್ ಮೂಲಕ ಪ್ರದರ್ಶಿಸಿದರು.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ