ಕಾಸರಗೋಡು : ಬೈಕ್ ಅಪಘಾತದಲ್ಲಿ ಯುವಕ ನೋರ್ವ ಮೃತಪಟ್ಟ ಘಟನೆ ವೆಳ್ಳರಿಕುಂಡು ಕಾರ್ಯೋಡ್ ಚಾಲಿ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.
ಚುಲ್ಲಿ ಚರ್ಚ್ ಸಮೀಪದ ಜಸ್ಟಿನ್ (26) ಮೃತ ಯುವಕ. ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಈ ಅಪಘಾತ ನಡೆದಿದೆ. ಗಂಭೀರ ಗಾಯಗೊಂಡ ಜಸ್ಟಿನ್ ನನ್ನು ಸ್ಥಳೀಯರು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.
ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಿದೆ. ವೆಳ್ಳರಿಕುಂಡು ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ