ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದೆ. ಮೊದಲ ಇನಿಂಗ್ಸ್ನಲ್ಲಿ ಭಾರತದ ಪರ ರವಿಚಂದ್ರನ್ ಅಶ್ವಿನ್ ಸೆಂಚುರಿ ಸಿಡಿಸಿದ್ದರು. ಇದೀಗ ದ್ವಿತೀಯ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಮೂರಂಕಿ ರನ್ ಕಲೆಹಾಕಿದ್ದಾರೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಂತ್ 123 ಎಸೆತಗಳಲ್ಲಿ ಶತಕ ಪೂರೈಸಿದರು.  ಈ ಶತಕದೊಂದಿಗೆ ಟೀಮ್ ಇಂಡಿಯಾ ಪರ ಟೆಸ್ಟ್ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ವಿಕೆಟ್ ಕೀಪರ್ಗಳ ಪಟ್ಟಿಯಲ್ಲಿ ರಿಷಭ್ ಪಂತ್ ಅಗ್ರಸ್ಥಾನಕ್ಕೇರಿದ್ದಾರೆ,

ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ ಪರ 144 ಟೆಸ್ಟ್ ಇನಿಂಗ್ಸ್ ಆಡಿರುವ ಧೋನಿ ಕೇವಲ 6  ಶತಕಗಳನ್ನು ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ರಿಷಭ್ ಪಂತ್ ಅಗ್ರಸ್ಥಾನಕ್ಕೇರಿದ್ದಾರೆ. 26 ವರ್ಷದ ರಿಷಭ್ ಪಂತ್ ಕೇವಲ 58 ಇನಿಂಗ್ಸ್ಗಳಲ್ಲಿ ಒಟ್ಟು 6 ಟೆಸ್ಟ್ ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಅತೀ ಕಡಿಮೆ ಇನಿಂಗ್ಸ್ಗಳಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಟೆಸ್ಟ್ ಶತಕ ಸಿಡಿಸಿದ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *